ಇತಿಹಾಸ ಬರೆದ ಭವಾನಿ ದೇವಿ 
ಕ್ರೀಡೆ

ಇತಿಹಾಸ ಬರೆದ ಒಲಂಪಿಯನ್ ಭವಾನಿ ದೇವಿ; ಏಷ್ಯನ್ ಚಾಂಪಿಯನ್ ಷಿಪ್ ನಲ್ಲಿ ಭಾರತಕ್ಕೆ ಮೊದಲ ಪದಕ

ಏಷ್ಯನ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಒಲಂಪಿಯನ್ ಭವಾನಿ ದೇವಿ ಇತಿಹಾಸ ನಿರ್ಮಾಣ ಮಾಡಿದ್ದು ದೇಶಕ್ಕೆ ಮೊದಲ ಪದಕ ತಂದುಕೊಟ್ಟಿದ್ದಾರೆ.

ಬೀಜಿಂಗ್: ಏಷ್ಯನ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಒಲಂಪಿಯನ್ ಭವಾನಿ ದೇವಿ ಇತಿಹಾಸ ನಿರ್ಮಾಣ ಮಾಡಿದ್ದು ದೇಶಕ್ಕೆ ಮೊದಲ ಪದಕ ತಂದುಕೊಟ್ಟಿದ್ದಾರೆ.

ಚೀನಾದ ವುಕ್ಸಿಯಲ್ಲಿ ನಡೆದ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಪೆನ್ಸರ್ ಭವಾನಿ ದೇವಿ (Bhavani Devi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಮಿಸಾಕಿ ಎಮುರಾ ಅವರನ್ನು ಕ್ವಾರ್ಟರ್‌ ಫೈನಲ್‌ನಲ್ಲಿ ಸೋಲಿಸಿ ಭವಾನಿ ದೇವಿ ಫೆನ್ಸಿಂಗ್‌ನಲ್ಲಿ (ಕತ್ತಿ ವರಸೆ) ಭಾರತಕ್ಕೆ ಮೊದಲ ಕಂಚಿನ ಪದಕ ತಂದುಕೊಟ್ಟಿದ್ದಾರೆ. 

ವಿಶ್ವದ ನಂಬರ್ ಒನ್ ಆಟಗಾರ್ತಿ ಮಿಸಾಕಿ ಎಮುರಾ ಅವರನ್ನು 15-10 ಅಂಕಗಳಿಂದ ಸೋಲಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದ ಭವಾನಿ ದೇವಿ ಸೆಮಿಫೈನಲ್ ಪ್ರವೇಶಿಸಿದ್ದರು. ಆದರೆ ಸೆಮಿಫೈನಲ್‌ನಲ್ಲಿ ಉಜ್ಬೇಕಿಸ್ತಾನ್‌ನ ಝೈನಾಬ್ ದೈಬೆಕೋವಾ ವಿರುದ್ಧ ಭವಾನಿ 14-15 ಅಂತರದಿಂದ ಸೋಲನುಭವಿಸಿದರು. ಇದಾಗ್ಯೂ ಮೂರನೇ ಸ್ಥಾನ ಪಡೆಯುವ ಮೂಲಕ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ದಾಖಲೆ ಬರೆದರು.

ಭವಾನಿ ದೇವಿ ಸಾಧನೆ ಶ್ಲಾಘಿಸಿದ ಕೇಂದ್ರ ಸಚಿವ ಠಾಕೂರ್
ಇನ್ನು ಈ ಐತಿಹಾಸಿಕ ಸಾಧನೆಯನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಕೊಂಡಾಡಿದ್ದಾರೆ. ವಿಶ್ವದ ನಂಬರ್ 1 ಆಟಗಾರ್ತಿಯನ್ನು ಸೋಲಿಸಿ ಪದಕ ಗೆದ್ದಿರುವುದು ನಿಜಕ್ಕೂ ಶ್ಲಾಘನೀಯ. ಪ್ರತಿಯೊಂದು ಅಂತ್ಯಕ್ಕೂ ಒಂದು ಆರಂಭವಿದೆ. ಟೋಕಿಯೋ 2020 ಒಲಿಂಪಿಕ್ಸ್‌ನಲ್ಲಿ ನಿಮ್ಮ ಅದ್ಭುತ ಸಾಧನೆಗಳು ಮತ್ತು ಆ ದಿನ ನೀವು ತೆಗೆದುಕೊಂಡ ಪ್ರತಿಜ್ಞೆಯು ಭಾರತಕ್ಕಾಗಿ ಫೆನ್ಸಿಂಗ್ ಕ್ರೀಡೆಯಲ್ಲಿ ಕನಸನ್ನು ನನಸಾಗಿಸಲು ಮೆಟ್ಟಿಲುಗಳಾಗಿವೆ.

ನಿಮ್ಮ ಈ ಸಾಧನೆಯು ಸಹ ಕ್ರೀಡಾಪಟುಗಳಿಗೆ ಸ್ಫೂರ್ತಿ ಆಗಲಿದೆ. ಅಲ್ಲದೆ ಈ ಕ್ರೀಡೆಗೂ ಅರ್ಹವಾದ ಮನ್ನಣೆಗೆ ಸಿಗುವಂತೆ ಮಾಡಲಿದೆ. ನಿಮ್ಮ ಪ್ರಯಾಣವು ಭಾರತೀಯ ಫೆನ್ಸಿಂಗ್‌ನಲ್ಲಿ ಹೊಸ ಯುಗಕ್ಕೆ ನಾಂದಿಯಾಡಲಿದೆ. ಈ ಮಹೋನ್ನತ ಸಾಧನೆಗಾಗಿ ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು, ನೀವು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಎತ್ತರಕ್ಕೆ ಏರುತ್ತಿರಲಿ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT