ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: WFI ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್
ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್, "ತನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಲಖನೌ: ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್, "ತನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಈ ಸಂಬಂಧ ಭಾನುವಾರ ವಿಡಿಯೋ ಸಂದೇಶ ನೀಡಿರುವ ಸಿಂಗ್, ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೂ ನೇಣು ಹಾಕಿಕೊಳ್ಳುತ್ತೇನೆ. ವಿಷಯ ದೆಹಲಿ ಪೊಲೀಸರ ಬಳಿ ಇದೆ ಆದ್ದರಿಂದ ಈ ವಿಷಯದ ಬಗ್ಗೆ ಹೆಚ್ಚು ವಿವರವಾಗಿ ಮಾತನಾಡಲು ಸಾಧ್ಯವಿಲ್ಲ. ತನ್ನ ವಿರುದ್ಧ ಯಾವುದಾದದರೂ ವಿಡಿಯೋ ಸಾಕ್ಷ್ಯ ಇದ್ದಲ್ಲಿ ಬಿಡುಗಡೆ ಮಾಡಲಿ ಎಂದು ಕುಸ್ತಿಪಟುಗಳಿಗೆ ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ ಎಂದು ಅವರು ಹೇಳಿದ್ದಾರೆ.
ಪ್ರತಿಭಟನಾನಿರತ ಕುಸ್ತಿಪಟುಗಳನ್ನು ಹೊರತುಪಡಿಸಿದರೆ ನಾನು ತಪ್ಪು ಮಾಡಿದ್ದೀನಿ ಅಂತಾ ಬೇರೆ ಯಾರನ್ನಾದರೂ ಕೇಳಿ, ಕುಸ್ತಿಪಟುಗಳು ಹಾಗೂ ದೇಶಕ್ಕಾಗಿ 11 ವರ್ಷ ನನ್ನ ಜೀವನವನ್ನು ತ್ಯಾಗ ಮಾಡಿದ್ದೇನೆ ಎಂದು ಭೂಷಣ್ ತಿಳಿಸಿದ್ದಾರೆ.
ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ರಚಿಸಲಾದ ಸಮಿತಿ ವರದಿ ಬಿಡುಗಡೆ ಮಾಡಲು ಸರ್ಕಾರದಿಂದ ವಿಳಂಬವಾಗಿದೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಪ್ರತಿಭಟನಾನಿರತ ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಮುಖ್ಯಸ್ಥರನ್ನು ತೆಗೆದುಹಾಕಬೇಕೆಂದು ಬಯಸುತ್ತಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.