ಕುಸ್ತಿಪಟುಗಳ ಪ್ರತಿಭಟನೆ ಸಾಂದರ್ಭಿಕ ಚಿತ್ರ 
ಕ್ರೀಡೆ

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ: ಇಂದು ಸಂಜೆ 6 ಗಂಟೆಗೆ ಗಂಗಾ ನದಿಗೆ ಪದಕ ಎಸೆಯುತ್ತೇವೆ- ಕುಸ್ತಿಪಟುಗಳು

ಬಿಜೆಪಿ ಸಂಸದರೂ ಆಗಿರುವ ಡಬ್ಲ್ಯೂಎಫ್ ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುಮಾರು ಒಂದೂವರೆ ತಿಂಗಳಿನಿಂದಲೂ ದೇಶದ ಅಗ್ರಮಟ್ಟದ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದಾರೆ.

ನವದೆಹಲಿ: ಬಿಜೆಪಿ ಸಂಸದರೂ ಆಗಿರುವ ಡಬ್ಲ್ಯೂಎಫ್ ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುಮಾರು ಒಂದೂವರೆ ತಿಂಗಳಿನಿಂದಲೂ ದೇಶದ ಅಗ್ರಮಟ್ಟದ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಆದಾಗ್ಯೂ, ಸರ್ಕಾರ ಮಾತ್ರ ಅವರ ಬೇಡಿಕೆಗಳಿಗೆ ಕಿವಿಗೂಡುತ್ತಿಲ್ಲ. ಇದರಿಂದ ಕೆರಳಿರುವ ಪ್ರತಿಭಟನಾನಿರತ ಕುಸ್ತಿಪಟುಗಳು, ಇಂದು ಸಂಜೆ 6 ಗಂಟೆಗೆ ಹರಿದ್ವಾರದ ಗಂಗಾ ನದಿಯಲ್ಲಿ ತಾವು ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಗೆದ್ದಿರುವ ಪದಕಗಳನ್ನು ಎಸೆಯುವುದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಾನುವಾರ ನೂತನ ಸಂಸತ್ ಭವನದತ್ತ ಮೆರವಣಿಗೆಯಲ್ಲಿ ತೆರಳುತ್ತಿದ್ದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಹಲವಾರು ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಅಲ್ಲದೇ ಜಂತರ್ ಮಂತರ್ ನಲ್ಲಿ ಪ್ರತಿಭಟನಾಕಾರರು ಹಾಕಿದ್ದ ಟೆಂಟ್ ಗಳನ್ನು ಕೂಡಾ ತೆರವುಗೊಳಿಸಲಾಗಿದೆ. 

ಪದೇ ಪದೇ ಮಾಡಲಾದ ಮನವಿ ನಿರ್ಲಕ್ಷಿಸಿ ಪ್ರತಿಭಟನಾಕಾರರು ಕಾನೂನು ಉಲ್ಲಂಘಿಸಿದ್ದರಿಂದ ಜಂತರ್ ಮಂತರ್ ನಿಂದ ಅವರನ್ನು ತೆರವುಗೊಳಿಸಲಾಗಿದ್ದು, ಬೇರೆ ಕಡೆ ಪ್ರತಿಭಟನೆ ನಡೆಸಲು ಅವಕಾಶ ಕೊಡುವುದಾಗಿ ದೆಹಲಿ ಪೊಲೀಸರು ನಿನ್ನೆ ಹೇಳಿದ್ದರು. ಆದರೆ, ಗಲಭೆ ಅಥವಾ ಯಾವುದೇ ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂಬ ಆರೋಪವನ್ನು ಪ್ರತಿಭಟನಾಕಾರರು ನಿರಾಕರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT