ಸಾತ್ವಿಕ್‌ ಸಾಯಿರಾಜ್ ರಂಕಿರೆಡ್ಡಿ-ಚಿರಾಗ್ ಶೆಟ್ಟಿ 
ಕ್ರೀಡೆ

Olympics 2024: ಪದಕದ ಭರವಸೆ ಮೂಡಿಸಿದ್ದ ಭಾರತದ ಬ್ಯಾಡ್ಮಿಂಟನ್ ಜೋಡಿಗೆ ಸೋಲು!

ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಮತ್ತು ವಿಶ್ವದ ಐದನೇ ಶ್ರೇಯಾಂಕದ ಜೋಡಿ ಸಾತ್ವಿಕ್ ಮತ್ತು ಚಿರಾಗ್ ಅವರು ವಿಶ್ವದ ಏಳನೇ ಶ್ರೇಯಾಂಕದ ಚಿಯಾ ಮತ್ತು ಸೋಹ್ ಜೋಡಿಯ ವಿರುದ್ಧ ಸೋಲು ಕಂಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಡಬಲ್ಸ್ ವಿಭಾಗದ ಕ್ವಾರ್ಟರ್ ಫೈನಲ್‌ನಲ್ಲಿ ಏಷ್ಯನ್ ಗೇಮ್ಸ್ ಚಾಂಪಿಯನ್‌ಗಳು ಮತ್ತು ಪದಕದ ನಿರೀಕ್ಷೆ ಮೂಡಿಸಿದ್ದ ಭಾರತದ ಸಾತ್ವಿಕ್‌ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮಲೇಷ್ಯಾದ ಆರೋನ್ ಚಿಯಾ ಮತ್ತು ಸೊಹ್ ವುಯಿ ಯಿಕ್ ವಿರುದ್ಧ ಸೋಲು ಕಂಡಿದ್ದು ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಮತ್ತು ವಿಶ್ವದ ಐದನೇ ಶ್ರೇಯಾಂಕದ ಜೋಡಿ ಸಾತ್ವಿಕ್ ಮತ್ತು ಚಿರಾಗ್ ಅವರು ವಿಶ್ವದ ಏಳನೇ ಶ್ರೇಯಾಂಕದ ಚಿಯಾ ಮತ್ತು ಸೋಹ್ ಜೋಡಿಯ ವಿರುದ್ಧ 64 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ 21-13, 14-21, 16-21 ರಲ್ಲಿ ಸೋಲು ಕಂಡಿದ್ದಾರೆ.

ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತರಾದ ಚಿಯಾ ಮತ್ತು ಸೋಹ್ ವಿರುದ್ಧದ 12 ಪಂದ್ಯಗಳಲ್ಲಿ ಭಾರತೀಯ ಜೋಡಿಯ ಒಂಬತ್ತನೇ ಸೋಲು ಇದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT