ಭಾರತ ಹಾಕಿ ತಂಡ 
ಕ್ರೀಡೆ

Paris Olympics 2024 Men's Hockey: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 3-2 ಗೋಲು ಗೆಲುವು!

ನಾಯಕ ಹರ್ಮನ್ ಪ್ರೀತ್ ಸಿಂಗ್ 13 ಹಾಗೂ 32ನೇ ನಿಮಿಷದಲ್ಲಿ 2 ಗೋಲು ಗಳಿಸಿದರೆ, ಅಭಿಷೇಕ್ 12ನೇ ನಿಮಿಷದಲ್ಲಿ ಮತ್ತೊಂದು ಗೋಲು ಗಳಿಸುವ ಮೂಲಕ ಭಾರತಕ್ಕೆ ಮುನ್ನಡೆ ತಂದುಕೊಟ್ಟರು.

ಪ್ಯಾರಿಸ್: ಶುಕ್ರವಾರ ಇಲ್ಲಿ ನಡೆದ ಪುರುಷರ ಹಾಕಿ ಪೂಲ್ ಬಿ ಪಂದ್ಯದಲ್ಲಿ ಭಾರತ ತಂಡ 3-2 ಗೋಲುಗಳ ಅಂತರದಿಂದ ತನ್ನ ಪ್ರಬಲ ಎದುರಾಳಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿತು. ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಹಾಕಿ ಸ್ಪರ್ಧೆಯ ಕ್ವಾರ್ಟರ್‌ಫೈನಲ್‌ಗೆ ಭಾರತ ಈಗಾಗಲೇ ಅರ್ಹತೆ ಪಡೆದಿದೆ.

ನಾಯಕ ಹರ್ಮನ್ ಪ್ರೀತ್ ಸಿಂಗ್ 13 ಹಾಗೂ 32ನೇ ನಿಮಿಷದಲ್ಲಿ 2 ಗೋಲು ಗಳಿಸಿದರೆ, ಅಭಿಷೇಕ್ 12ನೇ ನಿಮಿಷದಲ್ಲಿ ಮತ್ತೊಂದು ಗೋಲು ಗಳಿಸುವ ಮೂಲಕ ಭಾರತಕ್ಕೆ ಮುನ್ನಡೆ ತಂದುಕೊಟ್ಟರು. ಆಸ್ಟ್ರೇಲಿಯಾದ ಪರ ಟಾಮ್ ಕ್ರೇಗ್ (25ನೇ ನಿಮಿಷ ) ಮತ್ತು ಬ್ಲೇಕ್ ಗೋವರ್ಸ್ (55ನೇ) ಗೋಲು ಗಳಿಸಿದರು.

ಕೊನೆಯ ಅಂತರಾಷ್ಟ್ರೀಯ ಪಂದ್ಯಾವಳಿ ಆಡುತ್ತಿರುವ ಭಾರತದ ಅನುಭವಿ ಗೋಲ್‌ಕೀಪರ್ ಪಿಆರ್ ಶ್ರೀಜೇಶ್ ಅದ್ಬುತ ಪ್ರದರ್ಶನದ ಮೂಲಕ ತಂಡಕ್ಕೆ ನೆರವಾದರು. 1972ರ ಮ್ಯೂನಿಚ್‌ನಲ್ಲಿ ನಡೆದ ಒಲಿಂಪಿಕ್ಸ್ ನಂತರ ಸುಮಾರು 52 ವರ್ಷಗಳ ನಂತರ ಭಾರತ ಆಸ್ಟ್ರೇಲಿಯಾ ವಿರುದ್ಧ ಒಲಿಂಪಿಕ್ಸ್‌ನಲ್ಲಿ ಗೆಲುವು ಸಾಧಿಸಿದ ಮೊದಲ ಪಂದ್ಯ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!