ವಿನೇಶ್ ಫೋಗಟ್ 
ಕ್ರೀಡೆ

Paris Olympics 2024: ಕುಸ್ತಿಯಲ್ಲಿ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ ವಿನೇಶ್ ಫೋಗಟ್!

ಕ್ವಾರ್ಟರ್ ಫೈನಲ್ ನಲ್ಲಿ ಮಹಿಳೆಯರ ಫ್ರೀಸ್ಟೈಲ್ 50 ಕೆಜಿ ವಿಭಾಗದಲ್ಲಿ ಉಕ್ರೇನ್ ನ ಒಕ್ಸಾನಾ ಲಿವಾಚ್ ಅವರನ್ನು 7-5 ಅಂತರದಿಂದ ಸೋಲಿಸಿದ ವಿನೇಶ್ ಫೋಗಟ್ ಸೆಮಿ ಫೈನಲ್ ಗೆ ಲಗ್ಗೆ ಇಡುವ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ.

ಪ್ಯಾರಿಸ್: ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರು ಮಂಗಳವಾರ ಪ್ಯಾರಿಸ್ ಒಲಿಂಪಿಕ್ಸ್ ನ 50 ಕೆಜಿ ವಿಭಾಗದಲ್ಲಿ ಉಕ್ರೇನ್ ನ ಒಕ್ಸಾನಾ ಲಿವಾಚ್ ಅವರನ್ನು ಸೋಲಿಸುವ ಮೂಲಕ ಚೊಚ್ಚಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ್ದಾರೆ.

ಕ್ವಾರ್ಟರ್ ಫೈನಲ್ ನಲ್ಲಿ ಮಹಿಳೆಯರ ಫ್ರೀಸ್ಟೈಲ್ 50 ಕೆಜಿ ವಿಭಾಗದಲ್ಲಿ ಉಕ್ರೇನ್ ನ ಒಕ್ಸಾನಾ ಲಿವಾಚ್ ಅವರನ್ನು 7-5 ಅಂತರದಿಂದ ಸೋಲಿಸಿದ ವಿನೇಶ್ ಫೋಗಟ್ ಸೆಮಿ ಫೈನಲ್ ಗೆ ಲಗ್ಗೆ ಇಡುವ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ.

ಇದಕ್ಕೂ ಮುನ್ನಾ ನಡೆದ 50 ಕೆಜಿ ವಿಭಾಗದ ಆರಂಭಿಕ ಸುತ್ತಿನಲ್ಲಿ ನಾಲ್ಕು ಬಾರಿಯ ವಿಶ್ವ ಚಾಂಪಿಯನ್ ಹಾಗೂ ಹಾಲಿ ಚಿನ್ನದ ಪದಕ ವಿಜೇತೆ ಜಪಾನಿನ ಯುಯಿ ಸುಸಾಕಿ ಅವರನ್ನು ಸೋಲಿಸುವ ಮೂಲಕ ವಿನೇಶ್ ಫೋಗಟ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದರು.

ವಿನೇಶ್ ಕೊನೆಯ 5 ಸೆಕೆಂಡುಗಳವರೆಗೆ 0-2 ರಿಂದ ಹಿಂದುಳಿದಿದ್ದರು. ಆದರೆ ಕೊನೆಯಲ್ಲಿ ಮೂರು ಅಂಕಗಳನ್ನು ಪಡೆಯುವ ಮೂಲಕ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ನ್ನು 3-2 ಅಂತರದಿಂದ ಸೋಲಿಸಿದರು.

ಅಂತಾರಾಷ್ಟ್ರೀಯ ವೃತ್ತಿ ಜೀವನದಲ್ಲಿ ಸುಸಾಕಿ ಅವರಿಗೆ ಮೊದಲ ಬಾರಿಗೆ ಸೋಲಾಗಿದೆ. ಈ ಪಂದ್ಯಕ್ಕೂ ಮುನ್ನಾ ಸುಸಾಕಿ ಅವರು 82 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, ಎಲ್ಲದರಲ್ಲೂ ಗೆಲುವು ಸಾಧಿಸಿದ್ದರು. ವಿನೇಶ್ ಫೋಗಟ್ ಮಂಗಳವಾರ ರಾತ್ರಿ 10-30ಕ್ಕೆ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಯಸ್ನಿಲಿಸ್ ಗುಜ್ಮಾನ್ ಅವರನ್ನು ಎದುರಿಸಲಿದ್ದಾರೆ.

ಭಾರತದ ಮಾಜಿ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ದ ಲೈಂಗಿಕ ಕಿರುಕುಳ ಆರೋಪದಲ್ಲಿ ಕೆಲ ದಿನಗಳ ಹಿಂದೆ ದೆಹಲಿಯ ಜಂತರ್ ಮಂಥರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ವಿನೇಶ್ ಫೋಗಟ್ ಮುಂಚೂಣಿಯಲ್ಲಿದ್ದರು. ನ್ಯಾಯಾಲಯದಲ್ಲಿ ಈ ಪ್ರಕರಣವು ವಿಚಾರಣೆಯಲ್ಲಿದೆ. ವಿನೇಶ್ ಈ ಹಿಂದಿನ ಎರಡು ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲಲು ವಿಫಲರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!