ಅಮನ್ ಸೆಹ್ರಾವತ್ 
ಕ್ರೀಡೆ

Olympics 2024 ಭಾರತಕ್ಕೆ ಮತ್ತೊಂದು ಪದಕ?; ಕುಸ್ತಿಯಲ್ಲಿ ಸೆಮಿಫೈನಲ್‌ಗೆ Aman Sehrawat ಲಗ್ಗೆ!

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಪುರುಷರ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಸೆಮಿಫೈನಲ್‌ ಪ್ರವೇಶಸಿದ್ದಾರೆ.

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಪ್ರಕರಣದಿಂದ ಕೊಂಚ ಹಿನ್ನಡೆಯಾಗಿದ್ದ ಭಾರತಕ್ಕೆ ಇದೀಗ ಮತ್ತೊಂದು ಪದಕದ ಆಸೆ ಮೊಳಕೆಯೊಡೆದಿದ್ದು, ಪುರುಷರ ಕುಸ್ತಿಯಲ್ಲಿ ಅಮನ್ ಸೆಹ್ರಾವತ್ (Aman Sehrawat ) ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.

ಹೌದು.. ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಪುರುಷರ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಸೆಮಿಫೈನಲ್‌ ಪ್ರವೇಶಸಿದ್ದಾರೆ.

ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 21 ವರ್ಷದ ಅಮನ್ ಅವರು ಮಾಜಿ ವಿಶ್ವ ಚಾಂಪಿಯನ್ ಅಲ್ಬೇನಿಯಾದ ಜೆಲಿಮ್‌ಖಾನ್ ಅಬಕರೊವ್ (Zelimkhan Abkarov) ವಿರುದ್ಧ 12-0 ಅಂತರದ ಭರ್ಜರಿ ಗೆಲುವು ಗಳಿಸಿದ್ದಾರೆ.

ಸೆಮಿಫೈನಲ್ ಮುಖಾಮುಖಿ ಇಂದು ರಾತ್ರಿ 9.45ಕ್ಕೆ (ಭಾರತೀಯ ಕಾಲಮಾನ) ನಡೆಯಲಿದ್ದು, ಅಗ್ರ ಶ್ರೇಯಾಂಕಿತ ಜಪಾನ್‌ನ ರೀ ಹಿಗುಚಿ ಸವಾಲನ್ನು ಎದುರಿಸಲಿದ್ದಾರೆ.

ಇದಕ್ಕೂ ಮೊದಲು, ಮೊದಲ ಸುತ್ತಿನಲ್ಲಿ ಅಮೋಘ ಪ್ರದರ್ಶನ ನೀಡಿದ ಅಮನ್ ಅವರು ನಾರ್ತ್ ಮ್ಯಾಸೆಡೋನಿಯಾದ ವ್ಲಾಡಿಮಿರ್ ಎಗೊರೊವ್ ವಿರುದ್ಧ 10-0 ಅಂತರದ ಗೆಲುವು ದಾಖಲಿಸಿದ್ದರು. ಅಮನ್ ಸೆಹ್ರಾವತ್, ಪುರುಷರ ಕುಸ್ತಿ ವಿಭಾಗದಲ್ಲಿ ಭಾಗವಹಿಸುತ್ತಿರುವ ಭಾರತದ ಏಕಮಾತ್ರ ಸ್ಪರ್ಧಿ ಆಗಿದ್ದು, ಈಗ ಇನ್ನೊಂದು ಪಂದ್ಯ ಗೆದ್ದರೆ ಫೈನಲ್‌ಗೆ ಪ್ರವೇಶಿಸುವುದರೊಂದಿಗೆ ಪದಕ ಖಾತ್ರಿಪಡಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT