ವಿನೇಶ್ ಪೋಗಟ್ 
ಕ್ರೀಡೆ

ವಿನೇಶ್ ಫೋಗಟ್ ಗೆ 'ಬೆಳ್ಳಿ' ಪದಕ?: ಭಾನುವಾರ ಸಿಎಎಸ್ ಮಹತ್ವದ ತೀರ್ಪು

ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದ ಫೈನಲ್‌ ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ ಪ್ರಕರಣವನ್ನು ಆಲಿಸಿದ ಸಿಎಎಸ್ ತನ್ನ ನಿರ್ಧಾರದ ದಿನಾಂಕವನ್ನು ವಿಸ್ತರಿಸಿದೆ.

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದ ಫೈನಲ್‌ ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ ಪ್ರಕರಣವನ್ನು ಆಲಿಸಿದ ಸಿಎಎಸ್ ತನ್ನ ನಿರ್ಧಾರದ ದಿನಾಂಕವನ್ನು ವಿಸ್ತರಿಸಿದೆ.

CAS ತನ್ನ ತೀರ್ಪು ಇಂದು ಭಾರತೀಯ ಕಾಲಮಾನ ರಾತ್ರಿ 9:30ಕ್ಕೆ ಬರಬೇಕಿತ್ತು. ಆದರೆ ವಿಚಾರಣೆ ಪ್ರಕ್ರಿಯೆಗಳು ಮುಗಿದಿದ್ದು ಈಗ ತೀರ್ಪು ಆಗಸ್ಟ್ 11ರ ಭಾನುವಾರದಂದು ಭಾರತೀಯ ಕಾಲಮಾನ ರಾತ್ರಿ 9:30ಕ್ಕೆ ಬರಲಿದೆ.

ವಿನೇಶ್ ಫೋಗಟ್ ವಿರುದ್ಧ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಮತ್ತು ಇಂಟರ್ನ್ಯಾಷನಲ್ ಒಲಂಪಿಕ್ ಕಮಿಟಿ ಪ್ರಕರಣದಲ್ಲಿ ತನ್ನ ತೀರ್ಪಿನ ನಾಳೆ ನೀಡಲಿದೆ. ಫೈನಲ್‌ನ ಪಂದ್ಯಕ್ಕೂ ಮುನ್ನ 100 ಗ್ರಾಂ ಅಧಿಕ ತೂಕ ಹೊಂದಿದ್ದಕ್ಕಾಗಿ ವಿನೇಶ್ ಪೊಗಟ್ ರನ್ನು ಅನರ್ಹಗೊಳಿಸಲಾಗಿತ್ತು. ಹೀಗಾಗಿ ತನಗೆ ಬೆಳ್ಳಿ ಪದಕವನ್ನು ನೀಡಬೇಕೆಂದು ವಿನೇಶ್ ಒತ್ತಾಯಿಸಿದ್ದರು.

ವಿನೇಶ್ ಅವರ ತಂಡವು ಮಾರ್ಚ್ 7ರ ಸಂಜೆ ಸಿಎಎಸ್ ಅನ್ನು ಸಂಪರ್ಕಿಸಿತ್ತು. ವಿನೇಶ್ ಅವರ ಮನವಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಸ್ವೀಕರಿಸಿದ್ದು, ಪ್ರಕರಣದ ವಿಚಾರಣೆಯನ್ನು ಗುರುವಾರ ನಿಗದಿಪಡಿಸಲಾಗಿತ್ತು. ಆದರೆ ಭಾರತೀಯ ವಕೀಲರನ್ನು ನೇಮಿಸಲು ಸಾಧ್ಯವಾಗದ ಕಾರಣ ಪ್ರಕರಣವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು. ಆದಾಗ್ಯೂ, ಸಿಎಎಸ್ ವಿನೇಶ್ ಅವರ ಬೇಡಿಕೆಯನ್ನು ಒಪ್ಪಿಕೊಂಡು ವಕೀಲರ ನೇಮಕಕ್ಕೆ ಕಾಲಾವಕಾಶ ನೀಡಿತ್ತು. ಹೀಗಾಗಿ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದುಷ್ಪತ್ ಸಿಂಘಾನಿಯಾ ಅವರು ಇಂದು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ವಾದ ಮಂಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel