ರುಬಿನಾ ಫ್ರಾನ್ಸಿಸ್ 
ಕ್ರೀಡೆ

Paralympics 2024: ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚು ಗೆದ್ದ ರುಬಿನಾ ಫ್ರಾನ್ಸಿಸ್

ಇಂದು ನಡೆದ ಮಹಿಳೆಯರ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ ರುಬಿನಾ ಒಟ್ಟು 211.1 ಅಂಕ ಗಳಿಸಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.

ಪ್ಯಾರಿಸ್: ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಶೂಟರ್‌ಗಳು ಉತ್ತಮ ಪ್ರದರ್ಶನ ಮುಂದುವರಿಸಿದ್ದು, ರುಬಿನಾ ಫ್ರಾನ್ಸಿಸ್ ಅವರು ಮಹಿಳೆಯರ ಏರ್ ಪಿಸ್ತೂಲ್ SH1 ಸ್ಪರ್ಧೆಯ ಫೈನಲ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಶೂಟಿಂಗ್‌ನಲ್ಲಿ ಭಾರತದ ಪದಕಗಳ ಸಂಖ್ಯೆ ನಾಲ್ಕಕ್ಕೆ ಹಾಗೂ ಒಟ್ಟಾರೆ ಪದಕಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಇಂದು ನಡೆದ ಮಹಿಳೆಯರ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ ರುಬಿನಾ ಒಟ್ಟು 211.1 ಅಂಕ ಗಳಿಸಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.

ಎಂಟು ಮಹಿಳೆಯರ ನಡುವೆ ನಡೆದ ಈ ಫೈನಲ್‌ ಸುತ್ತಿನಲ್ಲಿ ರುಬಿನಾ ಬೆಳ್ಳಿ ಪದಕದ ರೇಸ್​ನಲ್ಲಿದ್ದರು. ಆದರೆ ಕೊನೆಯ ಎರಡು ಶಾಟ್​ಗಳಲ್ಲಿ ಲಯ ಕಳೆದುಕೊಂಡ ಅವರು ಒಟ್ಟು 211.1 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದರು. ಮೊನ್ನೆ ನಡೆದ ಅರ್ಹತಾ ಸುತ್ತಿನಲ್ಲಿ ಏಳನೇ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದಿದ್ದರು.

ಇದಕ್ಕೂ ಮೊದಲು ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನ ಎರಡನೇ ದಿನ, ಅವನಿ ಲೆಖರಾ ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ಈವೆಂಟ್​ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದರೆ, ಇದೇ ಈವೆಂಟ್​ನಲ್ಲಿ ಮತ್ತೊರ್ವ ಭಾರತೀಯ ಸ್ಪರ್ಧಿ ಮೋನಾ ಅಗರ್ವಾಲ್ ಕಂಚಿನ ಪದಕ ಗೆದ್ದಿದ್ದರು. ಆ ನಂತರ, ಪುರುಷರ 10 ಮೀಟರ್ ಏರ್ ಪಿಸ್ತೂಲ್ (SH1) ನಲ್ಲಿ ಮನೀಶ್ ನರ್ವಾಲ್ ಬೆಳ್ಳಿ ಪದಕ ಗೆದ್ದಿದ್ದರು. ಉಳಿದಂತೆ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪಾಲ್ ಕಂಚಿನ ಪದಕ ಗೆದ್ದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT