ದಂಪತಿಗಳನ್ನು ಆಶೀರ್ವದಿಸಿದ ಕೇಂದ್ರ ಸಚಿವ ಶೇಖಾವತ್ 
ಕ್ರೀಡೆ

PV Sindhu Marriage: ವೆಂಕಟ್ ದತ್ತಾ ಸಾಯಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪಿವಿ ಸಿಂಧು!

ಡಿಸೆಂಬರ್ 24ರಂದು ಸಿಂಧು ಅವರ ತವರು ಹೈದರಾಬಾದ್‌ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಬ್ಯಾಡ್ಮಿಂಟನ್ ಚಾಂಪಿಯನ್ ಪಿವಿ ಸಿಂಧು ಅವರು ಇಂದು ಉದಯಪುರದಲ್ಲಿ ತೆಲುಗು ಸಂಪ್ರದಾಯದಂತೆ ವೆಂಕಟ್ ದತ್ತಾ ಸಾಯಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ಸಮಾರಂಭ ನಡೆಯಿತು. ದಂಪತಿಗಳು ಇನ್ನೂ ಅಧಿಕೃತ ಫೋಟೋಗಳನ್ನು ಹಂಚಿಕೊಂಡಿಲ್ಲವಾದರೂ, ಈವೆಂಟ್‌ನ ಹಲವಾರು ಗ್ಲಿಂಪ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸಮಾರಂಭದ ಚಿತ್ರವನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳುವ ಮೂಲಕ ನವ ದಂಪತಿಗಳಿಗೆ ಆಶೀರ್ವಾದಿಸಿದರು. ಡಿಸೆಂಬರ್ 24ರಂದು ಸಿಂಧು ಅವರ ತವರು ಹೈದರಾಬಾದ್‌ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ವರ ವೆಂಕಟ್ ದತ್ತಾ ಸಾಯಿ ಹೈದರಾಬಾದ್ ಮೂಲದ ಉದ್ಯಮಿಯಾಗಿದ್ದು, ಪೊಸಿಡೆಕ್ಸ್ ಟೆಕ್ನಾಲಜೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಚಿಕೆ ಸ್ವಭಾವದ ದತ್ತಾ ಸಾಯಿ ಹೆಚ್ಚಿನವರ ಕಣ್ಣುಗಳಿಂದ ದೂರ ಉಳಿದಿದ್ದರು. ಆದರೆ ಮದುವೆಯ ಘೋಷಣೆಯ ನಂತರ ಎಲ್ಲರ ಗಮನ ಸೆಳೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!