ಅಭಿಷೇಕ್ ಶೇಖರ್ 
ಕ್ರೀಡೆ

ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆ: ಆರು ಪದಕ ಗೆದ್ದ ಬೆಂಗಳೂರಿನ ತರುಣ ಅಭಿಷೇಕ್ ಶೇಖರ್!

ಮಧ್ಯಪ್ರದೇಶ ರಾಜ್ಯ ಶೂಟಿಂಗ್ ಅಕಾಡೆಮಿಯಲ್ಲಿ ನಡೆದ ಸ್ಪರ್ಧೆಯಲ್ಲಿ 10-ಮೀಟರ್ ಏರ್ ರೈಫಲ್ ಫೈನಲ್‌ನಲ್ಲಿ 251.4 ಅಂಕ ಗಳಿಸುವುದರೊಂದಿಗೆ ಬೆಳ್ಳಿಯ ಜೊತೆಗೆ ಮೂರು ಚಿನ್ನದ ಪದಕಗಳನ್ನು ಗೆದ್ದರು.

ಬೆಂಗಳೂರು: ಭೋಪಾಲ್‌ನಲ್ಲಿ ನಡೆದ 67ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ (NSCC) ಆರು ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿರುವ ಬೆಂಗಳೂರಿನ 18 ವರ್ಷದ ಅಭಿಷೇಕ್ ಶೇಖರ್ ಈ ಸಾಧನೆ ಮಾಡಿದ ಕರ್ನಾಟಕದ ಮೊದಲ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ಮಧ್ಯಪ್ರದೇಶ ರಾಜ್ಯ ಶೂಟಿಂಗ್ ಅಕಾಡೆಮಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಒಲಿಂಪಿಯನ್‌ಗಳು ಮತ್ತು ವಿಶ್ವಕಪ್ ಚಾಂಪಿಯನ್‌ಗಳು ಸೇರಿದಂತೆ ಭಾರತದ ಗಣ್ಯ ಶೂಟರ್‌ಗಳಿದ್ದರು. ಅಲ್ಲಿ ಅಸಾಧಾರಣ ಪ್ರದರ್ಶನ ನೀಡಿದ ಅಭಿಷೇಕ್, ಕಿರಿಯ ಪುರುಷರ 10-ಮೀಟರ್ ಏರ್ ರೈಫಲ್ ಫೈನಲ್‌ನಲ್ಲಿ 251.4 ಅಂಕ ಗಳಿಸುವುದರೊಂದಿಗೆ ಬೆಳ್ಳಿಯ ಜೊತೆಗೆ ಮೂರು ಚಿನ್ನದ ಪದಕಗಳನ್ನು ಗೆದ್ದರು.

ಫೈನಲ್ ಪಂದ್ಯದಲ್ಲಿ ಎದುರಾಳಿಯಾಗಿದ್ದ 2024 ರ ಪ್ಯಾರಿಸ್ ಒಲಿಂಪಿಕ್ಸ್‌ನ ಸ್ಪರ್ಧಿ ರುದ್ರಂಕ್ಷ್ ಪಾಟೀಲ್ ಅವರನ್ನು ಸೋಲಿಸಿದರು. ತಿಲೋತ್ತಮಾ ಸೇನ್ ಅವರೊಂದಿಗೆ ಜೂನಿಯರ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದ ಅಭಿಷೇಕ್ ನಾಗರಿಕ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದರು.

2019 ರಲ್ಲಿ ತನ್ನ ಪ್ರಯಾಣವನ್ನು ಪ್ರಾರಂಭಿಸಿದ ಅಭಿಷೇಕ್, 10 ಮೀಟರ್ ಶೂಟಿಂಗ್ ಸ್ಪರ್ಧೆಯಲ್ಲಿ ಎಲ್ಲಾ ವಿಭಾಗಗಳಲ್ಲಿ ಚಿನ್ನ ಗೆಲ್ಲುವ ಮೂಲಕ ತರಬೇತಿ ಪಡೆದ ಎರಡನೇ ತಿಂಗಳಲ್ಲಿ ಕರ್ನಾಟಕದ ಎಲ್ಲಾ ದಾಖಲೆಗಳನ್ನು ಮುರಿದ್ದರು.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಎರಡು ವರ್ಷಗಳ ವಿರಾಮದ ನಂತರ ಶಿಕ್ಷಣದ ಮೇಲೆ ಕೇಂದ್ರೀಕರಿಸಿದ್ದ ಅವರು 2022 ರಲ್ಲಿ ಮತ್ತೆ ಶೂಟಿಂಗ್ ಗೆ ಮರಳಿದ್ದರು. ಅಂದಿನಿಂದ ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್ ಮತ್ತು ದಸರಾ ಕಪ್ ಸೇರಿದಂತೆ ಹಲವಾರು ಪುರಸ್ಕಾರಗಳನ್ನು ಗಳಿಸಿದ್ದಾರೆ.

ಅವರಿಗೆ ಬೆಂಗಳೂರಿನ ಶೂಟಿಂಗ್ ಅಕಾಡೆಮಿಯಲ್ಲಿ ಹೆಸರಾಂತ ತರಬೇತುದಾರ ರಾಮಚಂದ್ರನ್ ಪುರುಷೋತ್ತಮನ್ ತರಬೇತಿ ನೀಡುತ್ತಿದ್ದಾರೆ. ಅವರಿಗೆ ಕರ್ನಾಟಕ ರಾಜ್ಯ ರೈಫಲ್ ಅಸೋಸಿಯೇಷನ್ ಬೆಂಬಲವಾಗಿ ನಿಂತಿದೆ. ಮುಂದಿನ ಒಲಿಂಪಿಕ್ಸ್‌ನಲ್ಲಿ ವೇದಿಕೆಯ ಮೇಲೆ ನಿಂತು ನನ್ನ ದೇಶವನ್ನು ಹೆಮ್ಮೆ ಪಡುವಂತೆ ಮಾಡುವುದು ನನ್ನ ಅಂತಿಮ ಕನಸು ಎಂದು ಅಭಿಷೇಕ್ ತಮ್ಮ ಭವಿಷ್ಯದ ಮಹತ್ವಾಕಾಂಕ್ಷೆಗಳನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT