ಬೆಂಗಳೂರು ಇಂಟರ್ನ್ಯಾಷನಲ್ ಓಪನ್ ಚೆಸ್ ಟೂರ್ನಿಗೆ ಚಾಲನೆ 
ಕ್ರೀಡೆ

ಬೆಂಗಳೂರು ಇಂಟರ್ನ್ಯಾಷನಲ್ ಓಪನ್ ಚೆಸ್ ಟೂರ್ನಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು ಇಂಟರ್ನ್ಯಾಷನಲ್ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಟೂರ್ನಮೆಂಟ್​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಶ್ವ ಚಾಂಪಿಯನ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಚಾಲನೆ ನೀಡಿದರು. 

ಬೆಂಗಳೂರು: ಬೆಂಗಳೂರು ಇಂಟರ್ನ್ಯಾಷನಲ್ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಟೂರ್ನಮೆಂಟ್​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಶ್ವ ಚಾಂಪಿಯನ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಚಾಲನೆ ನೀಡಿದರು. 

ಈ ಚೆಸ್ ಟೂರ್ನಿಯನ್ನು ಜನವರಿ 18 ರಿಂದ 26 ರವರೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ  ಅಖಿಲ ಭಾರತ ಚೆಸ್ ಫೆಡರೇಶನ್ ಮತ್ತು ಇಂಟರ್ನ್ಯಾಷನಲ್ ಚೆಸ್ ಫೆಡರೇಶನ್ ಸಹಯೋಗದಲ್ಲಿ ಬೆಂಗಳೂರು ನಗರ ಜಿಲ್ಲಾ ಚೆಸ್ ಅಸೋಸಿಯೇಷನ್ ಆಯೋಜಿಸುತ್ತಿದೆ. ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಬಿ ನಾಗೇಂದ್ರ ಹಾಗೂ ಕರ್ನಾಟಕ ಚೆಸ್ ಅಸೋಷಿಯೇಷನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
 
ಬೆಂಗಳೂರು ಇಂಟರ್ನ್ಯಾಷನಲ್ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಟೂರ್ನಿ ಉದೇ ಮೊದಲ ಬಾರಿಗೆ ನಡೆಯುತ್ತಿದ್ದು, ಒಟ್ಟು 3 ವಿಭಾಗಗಳಲ್ಲಿ ಆಯೋಜಿಸಲಾಗುತ್ತಿದೆ. ಎ’ ವಿಭಾಗದಲ್ಲಿ  35 ಕ್ಕೂ ಹೆಚ್ಚು ಗ್ರ್ಯಾಂಡ್ ಮಾಸ್ಟರ್‌ಗಳು ಮತ್ತು ವಿಶ್ವದಾದ್ಯಂತದ ಅಂತಾರಾಷ್ಟ್ರೀಯ ಮಾಸ್ಟರ್‌ಗಳು ಸ್ಪರ್ಧಿಸಲಿದ್ದಾರೆ.

‘ಬಿ’ ವಿಭಾಗದಲ್ಲಿ 2000 ಕ್ಕಿಂತ ಕಡಿಮೆ ರೇಟಿಂಗ್ ಹೊಂದಿರುವ ಪ್ರಬಲ ಸ್ಪರ್ಧಿಗಳಿರಲಿದ್ದಾರೆ. ಇನ್ನು ‘ಸಿ’ ವಿಭಾಗದಲ್ಲಿ 1600 ಕ್ಕಿಂತ ಕಡಿಮೆ ರೇಟಿಂಗ್ ಹೊಂದಿರುವ ಸ್ಪರ್ಧಾಳುಗಳು ಸೆಣೆಸಲಿದ್ದಾರೆ. 9 ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 2500 ಪಂದ್ಯಗಳು ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ನೀವು ಸಮರ್ಥರಲ್ಲದಿದ್ದರೆ ಮೊದಲು ನೀವು ರಾಜಿನಾಮೆ ಕೊಡಿ: CJI ಸೂರ್ಯಕಾಂತ್ ರಾಜೀನಾಮೆಗೆ Congress ಒತ್ತಾಯ!

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!