ಮೇರಿ ಕೋಮ್ 
ಕ್ರೀಡೆ

ಆಡುವ ಹಸಿವು ಇನ್ನೂ ಇದೆ, ಆದರೆ....: ಭಾರತದ ಲೆಜೆಂಡ್ ಮೇರಿ ಕೋಮ್ ಬಾಕ್ಸಿಂಗ್‌ಗೆ ನಿವೃತ್ತಿ ಘೋಷಣೆ!

ಭಾರತದ ಲೆಜೆಂಡರಿ ಬಾಕ್ಸರ್ ಮೇರಿ ಕೋಮ್ ಅವರು ಬುಧವಾರ, ಜನವರಿ 24ರಂದು ಬಾಕ್ಸಿಂಗ್‌ನಿಂದ ನಿವೃತ್ತಿಯಾಗುವ ನಿರ್ಧಾರವನ್ನು ಪ್ರಕಟಿಸಿದರು. ತಮ್ಮ ವಯಸ್ಸಿನ ಮಿತಿಯನ್ನು ಪ್ರಮುಖ ಕಾರಣವೆಂದು ಮೇರಿ ಕೋಮ್ ಉಲ್ಲೇಖಿಸಿದ್ದಾರೆ.

ಅಸ್ಸಾಂ: ಭಾರತದ ಲೆಜೆಂಡರಿ ಬಾಕ್ಸರ್ ಮೇರಿ ಕೋಮ್ ಅವರು ಬುಧವಾರ, ಜನವರಿ 24ರಂದು ಬಾಕ್ಸಿಂಗ್‌ನಿಂದ ನಿವೃತ್ತಿಯಾಗುವ ನಿರ್ಧಾರವನ್ನು ಪ್ರಕಟಿಸಿದರು. ತಮ್ಮ ವಯಸ್ಸಿನ ಮಿತಿಯನ್ನು ಪ್ರಮುಖ ಕಾರಣವೆಂದು ಮೇರಿ ಕೋಮ್ ಉಲ್ಲೇಖಿಸಿದ್ದಾರೆ.

ಅರು ಬಾರಿ ವಿಶ್ವ ಚಾಂಪಿಯನ್ ಮತ್ತು 2012ರ ಒಲಿಂಪಿಕ್ ಪದಕ ವಿಜೇತೆ ಹಾಗೂ ಸ್ಟಾರ್ ಇಂಡಿಯಾ ಬಾಕ್ಸರ್ ಮಾಂಗ್ಟೆ ಚುಂಗ್ನೈಜಾಂಗ್ ಮೇರಿ ಕೋಮ್ ಬುಧವಾರ ಬಾಕ್ಸಿಂಗ್​ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಕೈಗವಸು ಕಳಚಿ ಗೋಡೆಗೆ ನೇತು ಹಾಕಿದ್ದಾರೆ. ಅಂತರರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಷನ್ ನಿಯಮಗಳ ಪ್ರಕಾರ ಪುರುಷ ಮತ್ತು ಮಹಿಳಾ ಬಾಕ್ಸರ್​ಗಳು 40 ವರ್ಷ ವಯಸ್ಸಿನವರೆಗೆ ಮಾತ್ರ ಸ್ಪರ್ಧಿಸಲು ಅವಕಾಶ ನೀಡಲಾಗುತ್ತದೆ. ತಮಗೆ ಆಡುವ ಹಂಬಲ ಇದ್ದರೂ 41 ವರ್ಷದ ಮೇರಿ ಕೋಮ್​, ನಿಯಮಗಳ ಪ್ರಕಾರ ವಯಸ್ಸಿನ ಮಿತಿಯಿಂದ ತನ್ನ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ನನಗೆ ಇನ್ನೂ ಹಸಿವು ಇದೆ. ಆದರೆ ದುರದೃಷ್ಟವಶಾತ್ ವಯಸ್ಸಿನ ಮಿತಿ ಮುಗಿದಿರುವುದರಿಂದ ನಾನು ಯಾವುದೇ ಸ್ಪರ್ಧೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗಿನ್ನೂ ಆಡುವ ಸಾಮರ್ಥ್ಯ ಇದೆ. ಆದರೆ ವಯಸ್ಸಿನ ಮಿತಿಯಿಂದಾಗಿ ಬಾಕ್ಸಿಂಗ್​​ನಿಂದ ಹಿಂದೆ ಸರಿಯುತ್ತಿದ್ದೇನೆ. ನನ್ನ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದೆ. ಇದೀಗ ನಿವೃತ್ತಿ ಹೊಂದುವ ಸಮಯ' ಎಂದು ತಿಳಿಸಿದ್ದಾರೆ.

ಮೇರಿ ಕೋಮ್ 2012ರಲ್ಲಿ ಲಂಡನ್ ಒಲಿಂಪಿಕ್ಸ್‌ನಲ್ಲಿ 51 ಕೆಜಿ ವಿಭಾಗದಲ್ಲಿ ಕಂಚು ಗೆದ್ದಾಗ ಮಹಿಳಾ ಬಾಕ್ಸಿಂಗ್‌ನಲ್ಲಿ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಬಾಕ್ಸಿಂಗ್ ಇತಿಹಾಸದಲ್ಲಿ ಆರು ವಿಶ್ವ ಪ್ರಶಸ್ತಿಗಳನ್ನು ಗೆದ್ದ ಮೊದಲ ಮಹಿಳಾ ಬಾಕ್ಸರ್ ಮೇರಿ ಕೋಮ್‌.

ಅನುಭವಿ ಆಟಗಾರ್ತಿ ಲಂಡನ್ 2012ರ ಒಲಂಪಿಕ್ ಕ್ರೀಡಾಕೂಟದಲ್ಲಿ ಕಂಚಿನ ಪದಕವನ್ನೂ ಗೆದಿದ್ದಾರೆ. 18ನೇ ವಯಸ್ಸಿನಲ್ಲಿ ಪೆನ್ಸಿಲ್ವೇನಿಯಾದ ಸ್ಕ್ರಂಟನ್‌ನಲ್ಲಿ ನಡೆದ ವಿಶ್ವ ಕೂಟದಲ್ಲಿ ಅದ್ಭುತ ಪ್ರದರ್ಶನ ನೀಡಿ ತನ್ನನ್ನು ತಾನು ಜಗತ್ತಿಗೆ ಪರಿಚಯಿಸಿಕೊಂಡಿದ್ದರು.

ಎಐಬಿಎ (AIBA) ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎನಿಸಿದ್ದಾರೆ. 2005, 2006, 2008 ಮತ್ತು 2010ರ ಸೀಸನ್​ಗಳಲ್ಲಿ ವಿಶ್ವ ಚಾಂಪಿಯನ್‌ ಶಿಪ್ ಪ್ರಶಸ್ತಿ ಗೆದ್ದಿದ್ದಾರೆ. 2008ರಲ್ಲಿ ಪ್ರಶಸ್ತಿ ಗೆದ್ದ ನಂತರ ಮೇರಿ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಇದರಿಂದ ಕೆಲ ಕಾಲ ಬಾಕ್ಸಿಂಗ್​ನಿಂದ ವಿರಾಮ ತೆಗೆದುಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT