ವಿನೇಶ್ ಫೋಗಟ್ 
ಕ್ರೀಡೆ

Vinesh Phogat: ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಟೂರ್ನಿ: ಚಿನ್ನ ಗೆದ್ದ ಭಾರತದ ವಿನೇಶ್ ಫೋಗಟ್

ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಕುಸ್ತಿ ಟೂರ್ನಿಯಲ್ಲಿ ಭಾರತದ ಒಲಿಂಪಿಯನ್​ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) 50 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ನವದೆಹಲಿ: ಕೊನೆಯ ಕ್ಷಣದಲ್ಲಿ ವೀಸಾ ಪಡೆದು ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಟೂರ್ನಿಗೆ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಚಿನ್ನ ಗೆದ್ದಿದ್ದಾರೆ.

ಮ್ಯಾಡ್ರಿಡ್​ನಲ್ಲಿ ನಡೆದ ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಕುಸ್ತಿ ಟೂರ್ನಿಯಲ್ಲಿ ಭಾರತದ ಒಲಿಂಪಿಯನ್​ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) 50 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಶನಿವಾರ ನಡೆದ ಫೈನಲ್​ ಪಂದ್ಯದಲ್ಲಿ ಎದುರಾಳಿ ಮರೀರಾ ತ್ಯುಮೆರ್ಕೋವಾ ವಿರುದ್ಧ 10-5 ಅಂಕಗಳ ಭರ್ಜರಿ ಗೆಲುವು ಸಾಧಿಸಿ ಈ ಸಾಧನೆಗೈದಿದ್ದಾರೆ.

29 ವರ್ಷದ ವಿನೇಶ್​ ಸೆಮಿಫೈನಲ್​ ಪಂದ್ಯದಲ್ಲಿ ಕೆನಡಾದ ಕೇಟಿ ಡುಚಾಕ್ ಅವರನ್ನು 9-4 ಅಂಕಗಳಿಂದ ಸೋಲಿಸಿ ಫೈನಲ್​ಗೆ ಲಗ್ಗೆ ಇಟ್ಟಿದ್ದರು. ಫೈನಲ್​ನಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಈ ಹಿಂದೆ ಭಾರತೀಯ ಕುಸ್ತಿ ಒಕ್ಕೂಟದ ವಿರುದ್ಧ ತೊಡೆತಟ್ಟಿ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಮತ್ತು ಅರ್ಜುನ್ ಪ್ರಶಸ್ತಿಯನ್ನು ಹಿಂದಿರುಗಿಸಿದ ವಿಚಾರದಲ್ಲಿ ವಿನೇಶ್ ಫೋಗಟ್ ದೊಡ್ಡ ಸುದ್ದಿಯಾಗಿದ್ದರು. ಈ ಹಿಂದೆ 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದ ವಿನೇಶ್ ಈಗ 50 ಕೆ.ಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್