ಇಂಗ್ಲೆಂಡ್ ಮಣಿಸಿ ಯೂರೋ ಕಪ್ 2024 ಗೆದ್ದ ಸ್ಪೇನ್ 
ಕ್ರೀಡೆ

Euro 2024 final: ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ, 4ನೇ ಬಾರಿಗೆ ಪ್ರಶಸ್ತಿ ಗೆದ್ದ ಸ್ಪೇನ್!

ತೀವ್ರ ಕುತೂಹಲ ಕೆರಳಿಸಿದ್ದ ಯುರೋ ಕಪ್ ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪ್ರಬಲ ಇಂಗ್ಲೆಂಡ್ ವಿರುದ್ಧ ಸ್ಪೇನ್ ತಂಡ ಭರ್ಜರಿ ಗೆಲುವು ಸಾಧಿಸಿ 4ನೇ ಬಾರಿಗೆ ಪ್ರಶಸ್ತಿಗೆ ಮುತ್ತಿಟ್ಟಿದೆ.

ಬರ್ಲಿನ್: ತೀವ್ರ ಕುತೂಹಲ ಕೆರಳಿಸಿದ್ದ ಯುರೋ ಕಪ್ ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪ್ರಬಲ ಇಂಗ್ಲೆಂಡ್ ವಿರುದ್ಧ ಸ್ಪೇನ್ ತಂಡ ಭರ್ಜರಿ ಗೆಲುವು ಸಾಧಿಸಿ 4ನೇ ಬಾರಿಗೆ ಪ್ರಶಸ್ತಿಗೆ ಮುತ್ತಿಟ್ಟಿದೆ.

ಹೌದು.. ಫುಟ್ಬಾಲ್​ ಅಭಿಮಾನಿಗಳ ನಿರೀಕ್ಷೆಯಂತೆ ಈ ಬಾರಿಯ ಪ್ರತಿಷ್ಠಿತ ಯುರೋ ಕಪ್ ಫುಟ್‌ಬಾಲ್ ಟೂರ್ನಿಯಲ್ಲಿ(Euro 2024 final) ಸ್ಪೇನ್ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಭಾನುವಾರ ತಡರಾತ್ರಿ ನಡೆದ ಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್ (England vs Spain) ತಂಡವನ್ನು 2-1 ಗೋಲುಗಳಿಂದ ಮಣಿಸಿ ನಾಲ್ಕನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿದ್ದ ಫೈನಲ್​ ಪಂದ್ಯದಲ್ಲಿ ಮೊದಲಾರ್ಧದ ಆಟದ ಅವಧಿಯಲ್ಲಿ ಉಭಯ ತಂಡಗಳೂ ಗೋಲು ಬಾರಿಸಲು ಸಾಧ್ಯವಾಗಲಿಲ್ಲ. ಆದರೆ, 2ನೇ ಅವಧಿಯ 47ನೇ ನಿಮಿಷದಲ್ಲಿ ಸ್ಪೇನ್​ ಮೊದಲ ಯಶಸ್ಸು ಪಡೆಯಿತು.

ಮೊರಾಟಾ ನೀಡಿದ ಅತ್ಯುತ್ತಮ ಪಾಸ್ ಅನ್ನು ನಿಕೋ ವಿಲಿಯಮ್ಸ್ ಗೋಲಾಗಿ ಪರಿವರ್ತಿಸಿದರು. ಇದಾದ ಬಳಿಕ 73ನೇ ನಿಮಿಷದಲ್ಲಿ ಇಂಗ್ಲೆಂಡ್​ ಆಟಗಾರ ಕೋಲ್ ಪಾಲ್ಮರ್ ಗೋಲು ಬಾರಿಸಿ ಪಂದ್ಯವನ್ನು 1-1 ಸಮಬಲಕ್ಕೆ ತಂದರು. ಕೊನೆಯ ಹಂತದ 86ನೇ ನಿಮಿಷದಲ್ಲಿ ಮೈಕೆಲ್ ಒಯಾರ್ಜಾಬಲ್ ಗೋಲು ಬಾರಿಸಿ ಸ್ಪೇನ್ ತಂಡಕ್ಕೆ ಗೆಲುವು ತಂದುಕೊಟ್ಟರು.

ಯುರೋ 2024ರ ಫೈನಲ್‌ನಲ್ಲಿ ಸ್ಪೇನ್ ಗೆದ್ದು ಬೀಗಲು ಬದಲಿ ಆಟಗಾರ ಮೈಕೆಲ್ ಒಯಾರ್ಜಾಬಲ್ ನಾಟಕೀಯವಾಗಿ ಪಂದ್ಯಕ್ಕೆ ತಮ್ಮ ಗೋಲ್ ಮೂಲಕ ತಿರುವು ನೀಡಿದರು.

ಇಂಗ್ಲೆಂಡ್ ಗೆ ಸತತ 2ನೇ ಫೈನಲ್ ಸೋಲು

ಇನ್ನು 1936ರ ನಿರ್ಮಿಸಲ್ಪಟ್ಟ ಒಲಿಂಪಿಯಾ ಸ್ಟೇಡಿಯಂನಲ್ಲಿ ನಡೆದ ಉಭಯ ತಂಡಗಳ ಪ್ರಶಸ್ತಿ ಕಾದಾಟದಲ್ಲಿ ಸ್ಪೇನ್​ ಕೈ ಮೇಲಾಗಿದೆ. 1966ರ ಬಳಿಕ ಪ್ರಮುಖ ಟ್ರೋಫಿ ಜಯಿಸಲು ವಿಫಲವಾಗಿರುವ ಇಂಗ್ಲೆಂಡ್ ಈ ಬಾರಿಯೂ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಕಳೆದ ಬಾರಿಯೂ ಫೈನಲ್​ನಲ್ಲಿ ಮುಗ್ಗರಿಸಿ ರನ್ನರ್​ ಅಪ್​ ಪ್ರಶಸ್ತಿಗೆ ತೃಪ್ತಿಪಟ್ಟಿತ್ತು.

ಆರು ದಶಕಗಳಲ್ಲಿ ಸತತ ಎರಡನೇ ಬಾರಿ ಫೈನಲ್‌ ಪ್ರವೇಶಿಸಿದರೂ ಚೊಚ್ಚಲ ಪ್ರಶಸ್ತಿಯನ್ನು ಗೆಲ್ಲುವ ತಮ್ಮ ಎದುರಾಳಿಗಳ ಕನಸನ್ನು ನುಚ್ಚುನೂರು ಮಾಡಿದರು. 2021ರಲ್ಲಿಯೂ ಇಂಗ್ಲೆಂಡ್ ಫೈನಲ್‌ನಲ್ಲಿ ಎಡವಿತ್ತು. ಮೂರು ಬಾರಿ ಫೈನಲ್‌ ಪ್ರವೆಶಿಸಿದರೂ ಕಪ್‌ ಗೆಲ್ಲಲು ಸಾಧ್ಯವಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT