ಸಾತ್ವಿಕ್​- ಚಿರಾಗ್ ಜೋಡಿ 
ಕ್ರೀಡೆ

Paris Olympics 2024: ಇತಿಹಾಸ ಬರೆದ ಸಾತ್ವಿಕ್​- ಚಿರಾಗ್​, ಒಲಿಂಪಿಕ್ಸ್ ಕ್ವಾರ್ಟರ್ ​ಫೈನಲ್​ಗೇರಿದ ಭಾರತದ ಡಬಲ್ಸ್ ಜೋಡಿ!

ಭಾರತದ ಪುರುಷರ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಕ್ವಾರ್ಟರ್ ಫೈನಲ್ಸ್​​ ತಲುಪಿದ್ದಾರೆ.

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ಜೋಡಿ ಇತಿಹಾಸ ಬರೆದಿದ್ದು, ಕ್ವಾರ್ಟರ್ ​ಫೈನಲ್​ಗೇರುವ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಜೋಡಿ ಎಂಬ ಕೀರ್ತಿಗೆ ಭಾಜನವಾಗಿದೆ.

ಹೌದು.. ಭಾರತದ ಪುರುಷರ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಕ್ವಾರ್ಟರ್ ಫೈನಲ್ಸ್​​ ತಲುಪಿದ್ದಾರೆ. ಈ ಮೂಲಕ ಅವರು ಒಲಿಂಪಿಕ್ಸ್​ನಲ್ಲಿ ಎಂಟರ ಘಟ್ಟಕ್ಕೇರಿದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸಾತ್ವಿಕ್-ಚಿರಾಗ್ ಜರ್ಮನಿಯ ಮಾರ್ಕ್ ಲ್ಯಾಮ್ಸ್ಫಸ್ ಮತ್ತು ಮಾರ್ವಿನ್ ಸೀಡೆಲ್ ಅವರನ್ನು ಎದುರಿಸಬೇಕಿತ್ತು, ಆದರೆ ಲ್ಯಾಮ್ಸ್ಫಸ್ ಅವರ ಗಾಯದಿಂದಾಗಿ ಜರ್ಮನ್ ಜೋಡಿ ಹಿಂದೆ ಸರಿದರು. ಹೀಗಾಗಿ ಭಾರತದ ಜೋಡಿ ಕ್ವಾರ್ಟರ್​ ಫೈನಲ್ ಸ್ಥಾನ ಖಚಿತಪಡಿಸಿಕೊಂಡರು.

ಆ ಮೂಲಕ ಚಿರಾಗ್-ಸಾತ್ವಿಕ್ ಮತ್ತು ಅರ್ಡಿಯಾಂಟೊ-ಅಲ್ಫಿಯಾನ್ ಸಿ ಗುಂಪಿನ ಅಗ್ರ ಎರಡು ಸ್ಥಾನಗಳನ್ನು ಪಡೆಯುವುದು ಖಚಿತವಾಗಿದೆ. ಗುಂಪಿನ ಅಗ್ರ ಸ್ಥಾನಕ್ಕಾಗಿ ಭಾರತ ಮತ್ತು ಇಂಡೋನೇಷ್ಯಾ ಜೋಡಿಗಳು ಮಂಗಳವಾರ ಸ್ಪರ್ಧಿಸಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

SCROLL FOR NEXT