ಡಿಪಿ ಮನುಗೆ ಚಿನ್ನ 
ಕ್ರೀಡೆ

Taiwan Open 2024: ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದ ಕನ್ನಡಿಗ ಡಿಪಿ ಮನು

ತೈವಾನ್ ಓಪನ್ 2024 ಕ್ರೀಡಾಕೂಟದಲ್ಲಿ ಕನ್ನಡಿಗ ಡಿಪಿ ಮನು ಅತ್ಯುನ್ನತ ಸಾಧನೆ ಮಾಡಿದ್ದು, ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದಿದ್ದಾರೆ.

ತೈಪೆ: ತೈವಾನ್ ಓಪನ್ 2024 ಕ್ರೀಡಾಕೂಟದಲ್ಲಿ ಕನ್ನಡಿಗ ಡಿಪಿ ಮನು ಅತ್ಯುನ್ನತ ಸಾಧನೆ ಮಾಡಿದ್ದು, ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದಿದ್ದಾರೆ.

ಹೌದು.. ತೈವಾನ್ ಓಪನ್​-2024ರಲ್ಲಿ ಭಾರತ ಹಾಗೂ ಕರ್ನಾಟಕದ ಅಥ್ಲೀಟ್​ ಡಿಪಿ ಮನು ಅವರು ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದು, ಜಾವೆಲಿನ್ ಥ್ರೋ ಫೈನಲ್‌ನಲ್ಲಿ ತಮ್ಮ ಕೊನೆಸಯ ಪ್ರಯತ್ನದಲ್ಲಿ 81.58 ಮೀ ದೂರ ಜಾವೆಲಿನ್ ಎಸೆಯುವ ಮೂಲಕ ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

91.36 ಮೀಟರ್‌ ಜಾವೆಲಿನ್ ಥ್ರೋ ಎಸೆಯುವ ಮೂಲಕ ಏಷ್ಯನ್ ದಾಖಲೆಯನ್ನು ಹೊಂದಿರುವ ತೈವಾನ್​​ನ ಚೆಂಗ್ ಚಾವೊ-ತ್ಸುನ್ ಅವರು, ಈ ಸ್ಪರ್ಧೆಯಲ್ಲಿ 76.21 ಮೀಟರ್‌ ಎಸೆದು ಬೆಳ್ಳಿ ಗೆದ್ದಿದ್ದಾರೆ.

ಮತ್ತೊಬ್ಬ ತೈವಾನ್ ಆಟಗಾರ ಹುವಾಂಗ್ ಚಾವೊ-ಹಂಗ್ 71.24 ಮೀಟರ್​ ಜಾವೆಲಿನ್ ಥ್ರೋ ಹಾಕುವುದರೊಂದಿಗೆ ಕಂಚಿನ ಪದಕಕ್ಕೆ ತೃಪ್ತಿಪಟ್ಟರು.

ಈ ಹಿಂದೆ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ವಿಜೇತರಾಗಿದ್ದ ಡಿಪಿ ಮನು ಕೂದಲೆಳೆ ಅಂತರದಲ್ಲಿ ಭಾರತದ ನೀರಜ್ ಚೋಪ್ರಾ ವಿರುದ್ಧ ಸೋತು ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದರು. ಏಪ್ರಿಲ್​​ನಲ್ಲಿ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್​​-1 ಅನ್ನು ಗೆದ್ದಿದ್ದರು. ನಂತರ ಕಳೆದ ತಿಂಗಳು ಫೆಡರೇಶನ್ ಕಪ್‌ನಲ್ಲಿ ನೀರಜ್ ಚೋಪ್ರಾ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಕನ್ನಡಿಗ ಮನುಗೆ ಈ ವರ್ಷದ 3ನೇ ವೇದಿಕೆ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!