ಟಿ.ಕೆ ಚತುನ್ನಿ 
ಕ್ರೀಡೆ

ಭಾರತ ಫುಟ್‌ಬಾಲ್‌ ತಂಡದ ಮಾಜಿ ಆಟಗಾರ ಟಿ.ಕೆ. ಚತುನ್ನಿ ವಿಧಿವಶ

ಭಾರತ ಫುಟ್‌ಬಾಲ್‌ ತಂಡದ ಮಾಜಿ ಆಟಗಾರ ಮತ್ತು ತರಬೇತುದಾರ ಟಿ.ಕೆ.ಚತುನ್ನಿ (79) ಅವರು ಬುಧವಾರ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೊಚ್ಚಿ: ಭಾರತ ಫುಟ್‌ಬಾಲ್‌ ತಂಡದ ಮಾಜಿ ಆಟಗಾರ ಮತ್ತು ತರಬೇತುದಾರ ಟಿ.ಕೆ.ಚತುನ್ನಿ (79) ಅವರು ಬುಧವಾರ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 7.45ರ ಸುಮಾರಿಗೆ ಕೊನೆಯುಸಿರೆಳೆದರು.

ಕೇರಳ ಮತ್ತು ಗೋವಾ ತಂಡದಲ್ಲಿ ಪ್ರತಿಷ್ಟಿತ ಸಂತೋಷ್‌ ಟ್ರೋಫಿ ಫುಟ್‌ಬಾಲ್‌ ಪಂದ್ಯದಲ್ಲಿ ಗೋಲ್‌ಕೀಪರ್‌ ಆಗಿ ಆಟವಾಡಿದ್ದರು. ಭಾರತೀಯ ಫುಟ್‌ಬಾಲ್‌ನ ಅತ್ಯುತ್ತಮ ತರಬೇತುದಾರರಲ್ಲಿ ಒಬ್ಬರಾದ ಚತುನ್ನಿ ಅವರು 40 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಐ.ಎಂ.ವಿಜಯನ್, ಬ್ರೂನೊ ಕುಟಿನ್ಹೊ, ಜೊ ಪಾಲ್ ಅಂಚೇರಿ, ಸಿ.ವಿ.ಪಾಪ್ಪಚ್ಚನ್ ಹಾಗೂ ಉ.ಶರಫಾಲಿಯಂತಹ ಪ್ರಖ್ಯಾತ ಫುಟ್ ಬಾಲ್ ಕ್ರೀಡಾಪಟುಗಳು ಸೇರಿದಂತೆ ಅಸಂಖ್ಯಾತ ಪ್ರತಿಭಾವಂತ ಆಟಗಾರರನ್ನು ರೂಪಿಸಿದ ಹಿರಿಮೆ ಅವರದಾಗಿತ್ತು.

1979 ರಲ್ಲಿ ಅವರು ಕೇರಳದ ಸಂತೋಷ್ ಟ್ರೋಫಿ ತಂಡದ ತರಬೇತುದಾರರಾಗಿದ್ದರು. ಜತೆಗೆ ಮೋಹನ್ ಬಗಾನ್, ಡೆಂಪೊ ಗೋವಾ ಮತ್ತು ಎಫ್‌ಸಿ ಕೊಚ್ಚಿನ್ ಸೇರಿದಂತೆ ಹಲವಾರು ಪ್ರಸಿದ್ಧ ತಂಡಗಳಿಗೆ ತರಬೇತಿ ನೀಡಿದ್ದರು. ಚತುನ್ನಿ ಅವರು ‘ಫುಟ್ಬಾಲ್ ಮೈ ಸೋಲ್’ ಎಂಬ ಆತ್ಮಚರಿತ್ರೆಯನ್ನೂ ಬರೆದಿದ್ದಾರೆ. ಚತುನ್ನಿ ಅವರ ನಿಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್‌ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT