ಬಜರಂಗ್ ಪುನಿಯಾ 
ಕ್ರೀಡೆ

Bajrang Punia: ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅನಿರ್ದಿಷ್ಟಾವಧಿಗೆ ಅಮಾನತು!

ಟೋಕಿಯೊ ಒಲಿಂಪಿಕ್​ ಕಂಚಿನ ಪದಕ ವಿಜೇತ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ(Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಏಜೆನ್ಸಿ (National Anti-Doping Agency) ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ(bajrang punia Suspend) ಎಂದು ತಿಳಿದುಬಂದಿದೆ.

ನವದೆಹಲಿ: ಟೋಕಿಯೊ ಒಲಿಂಪಿಕ್​ ಕಂಚಿನ ಪದಕ ವಿಜೇತ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ(Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಏಜೆನ್ಸಿ (National Anti-Doping Agency) ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ(bajrang punia Suspend) ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ಆಯ್ಕೆ ಪ್ರಯೋಗಗಳಿಗೆ ತನ್ನ ಮೂತ್ರದ ಮಾದರಿಯನ್ನು ಒದಗಿಸಲು ಪುನಿಯಾ ವಿಫಲರಾಗಿದ್ದರು. ಇದರಿಂದಾಗಿ ಭವಿಷ್ಯದ ಯಾವುದೇ ಸ್ಪರ್ಧೆಯಲ್ಲಿ ಭಾಗವಹಿಸದಂತೆ ಅವರನ್ನು ಅಮಾನತುಗೊಳಿಸುವ ಆದೇಶವನ್ನು ನಾಡಾ(NADA) ಹೊರಡಿಸಿದೆ ಎಂದು ತಿಳಿದುಬಂದಿದೆ.

ನಾಡಾದ ಈ ಕ್ರಮದಿಂದಾಗಿ ಇದೇ ಜುಲೈನಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಅವರ ಪ್ರಯತ್ನಕ್ಕೆ ಹಿನ್ನಡೆ ಉಂಟುಮಾಡಿದೆ ಎಂದು ತಿಳಿದುಬಂದಿದೆ.

“ನಾಡಾ 2021 ರ ಆರ್ಟಿಕಲ್ 7.4 ರ ಪ್ರಕಾರ, ಈ ವಿಷಯದಲ್ಲಿ ವಿಚಾರಣೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರುವ ಮೊದಲು ಯಾವುದೇ ಸ್ಪರ್ಧೆ ಅಥವಾ ಚಟುವಟಿಕೆಯಲ್ಲಿ ಭಾಗವಹಿಸದಂತೆ ಬಜರಂಗ್ ಪುನಿಯಾ ಅವರನ್ನು ತಕ್ಷಣವೇ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ” ಎಂದು ನಾಡಾ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ನಾಡಾ ವಿರುದ್ಧವೇ ಗಂಭೀರ ಆರೋಪ ಮಾಡಿದ್ದ ಕುಸ್ತಿಪಟು

ಕೆಲವು ತಿಂಗಳ ಹಿಂದೆ ಪುನಿಯಾ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (ನಾಡಾ)) ಮೇಲೆ ಗಂಭೀರ ಆರೋಪವೊಂದನ್ನು ಮಾಡಿದ್ದರು. ಅಥ್ಲೀಟ್‌ಗಳ ಮೇಲೆ ಡೋಪ್ ಪರೀಕ್ಷೆ ನಡೆಸುವಾಗ ಅವಧಿ ಮೀರಿದ ಮತ್ತು ಹಳೆಯ ಉಪಕರಣಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದ್ದರು. ಜತೆಗೆ ಸಾಕ್ಷ್ಯ ಸಮೇತವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿದ್ದರು.

ನಾಡಾದ ಅಧಿಕಾರಿಗಳು ಬಜರಂಗ್ ಪುನಿಯಾ ಅವರ ಪರೀಕ್ಷೆಗಾಗಿ ಬಂದ ವೇಳೆ ಅವರ ಬಳಿಯಿದ್ದ ಉಪಕರಣಗಳು ಸಿರಿಂಜ್ ಮತ್ತು ಬಾಟಲಿಗಳನ್ನು ಬಜರಂಗ್ ಪರೀಕ್ಷಿಸಿದ್ದರು. ಈ ವೇಳೆ ಇವುಗಳೆಲ್ಲ ಅವಧಿ ಮೀರಿದ ಮತ್ತು ಹಳೆಯ ಉಪಕರಣ ಎನ್ನುವುದು ಬೆಳಕಿಗೆ ಬಂದಿತ್ತು. ತಕ್ಷಣ ಬಜರಂಗ್ ಇದನ್ನೆಲ್ಲ ವಿಡಿಯೊ ಮಾಡಿ ತಮ್ಮ ಟ್ವಿಟರ್‌ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಜತೆಗೆ ಕಳವಳ ಕೂಡ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT