ದೀಪಾ ಕರ್ಮಾಕರ್ 
ಕ್ರೀಡೆ

ಏಷ್ಯನ್ ಜಿಮ್ನಾಸ್ಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ದೀಪಾ ಕರ್ಮಾಕರ್!

ಭಾರತದ ಸ್ಟಾರ್ ಅಥ್ಲೀಟ್ ದೀಪಾ ಕರ್ಮಾಕರ್ ದೇಶಕ್ಕಾಗಿ ಮತ್ತೊಂದು ದೊಡ್ಡ ಸಾಧನೆ ಮಾಡಿದ್ದಾರೆ. ಭಾನುವಾರ ನಡೆದ ಮಹಿಳೆಯರ ವಾಲ್ಟ್ ಸ್ಪರ್ಧೆಯಲ್ಲಿ ಭಾರತದ ಈ ಅಗ್ರ ಜಿಮ್ನಾಸ್ಟ್ ಚಿನ್ನದ ಪದಕ ಗೆದ್ದರು.

ತಾಷ್ಕೆಂಟ್: ಭಾರತದ ಸ್ಟಾರ್ ಅಥ್ಲೀಟ್ ದೀಪಾ ಕರ್ಮಾಕರ್ ದೇಶಕ್ಕಾಗಿ ಮತ್ತೊಂದು ದೊಡ್ಡ ಸಾಧನೆ ಮಾಡಿದ್ದಾರೆ. ಭಾನುವಾರ ನಡೆದ ಮಹಿಳೆಯರ ವಾಲ್ಟ್ ಸ್ಪರ್ಧೆಯಲ್ಲಿ ಭಾರತದ ಈ ಅಗ್ರ ಜಿಮ್ನಾಸ್ಟ್ ಚಿನ್ನದ ಪದಕ ಗೆದ್ದರು. ಏಷ್ಯನ್ ಸೀನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ದೇಶದ ಮೊದಲ ಜಿಮ್ನಾಸ್ಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

30 ವರ್ಷದ ದೀಪಾ ಸ್ಪರ್ಧೆಯ ಕೊನೆಯ ದಿನದ ವಾಲ್ಟ್ ಫೈನಲ್‌ನಲ್ಲಿ ಸರಾಸರಿ 13.566 ಸ್ಕೋರ್ ಗಳಿಸಿದರು. ಉತ್ತರ ಕೊರಿಯಾದ ಕಿಮ್ ಸನ್ ಹಯಾಂಗ್ (13.466) ಮತ್ತು ಜೋ ಕ್ಯೊಂಗ್ ಬೈಯೊಲ್ (12.966) ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದರು. 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ವಾಲ್ಟ್ ಫೈನಲ್‌ನಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದ ದೀಪಾ, 2015ರ ಆವೃತ್ತಿಯಲ್ಲಿ ಇದೇ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದರು.

ಆಶಿಶ್ ಕುಮಾರ್ 2015ರ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ವಾಲ್ಟ್ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದರು. ಪ್ರಣತಿ ನಾಯಕ್ 2019 ಮತ್ತು 2022 ರ ವಾಲ್ಟ್ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದರು. ಡೋಪಿಂಗ್ ಉಲ್ಲಂಘನೆಯಿಂದಾಗಿ 21 ತಿಂಗಳ ಅಮಾನತುಗೊಂಡ ನಂತರ ಕಳೆದ ವರ್ಷ ಮರಳಿದ್ದ ದೀಪಾ ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಹೊರಗುಳಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್