ಕಪಿಲ್ ಪರ್ಮಾರ್ PTI
ಕ್ರೀಡೆ

Paralympics 2024: ಇತಿಹಾಸ ಸೃಷ್ಠಿಸಿದ ಕಪಿಲ್ ಪರ್ಮಾರ್; ಜೂಡೋದಲ್ಲಿ ಭಾರತಕ್ಕೆ ಕಂಚು; ಪದಕಗಳ ಸಂಖ್ಯೆ 25ಕ್ಕೆ ಏರಿಕೆ

ಕಪಿಲ್ ಪ್ಯಾರಾಲಿಂಪಿಕ್ಸ್ ಅಥವಾ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಜೂಡೋ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಈ ಮೂಲಕ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ತನ್ನ ಪದಕಗಳ ಸಂಖ್ಯೆಯನ್ನು 25ಕ್ಕೆ ಏರಿಸಿಕೊಂಡಿದೆ.

ಭಾರತದ ಪ್ಯಾರಾ ಜೂಡೋ ಆಟಗಾರ ಕಪಿಲ್ ಪರ್ಮಾರ್ ಅದ್ಭುತ ಪ್ರದರ್ಶನ ನೀಡಿ ಕಂಚಿನ ಪದಕ ಗೆದ್ದಿದ್ದಾರೆ. ಪುರುಷರ 60 ಕೆಜಿ ಜೆ1 ಸ್ಪರ್ಧೆಯ ಕಂಚಿನ ಪದಕಕ್ಕಾಗಿ ಕಪಿಲ್ ಬ್ರೆಜಿಲ್‌ನ ಎಲಿಟನ್ ಡಿ ಒಲಿವೇರಾ ಅವರನ್ನು 10-0 ಅಂತರದಿಂದ ಸೋಲಿಸಿ ಕಂಚು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಪಿಲ್ ಪ್ಯಾರಾಲಿಂಪಿಕ್ಸ್ ಅಥವಾ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಜೂಡೋ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಈ ಮೂಲಕ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ತನ್ನ ಪದಕಗಳ ಸಂಖ್ಯೆಯನ್ನು 25ಕ್ಕೆ ಏರಿಸಿಕೊಂಡಿದೆ. ಪ್ಯಾರಿಸ್ ಕ್ರೀಡಾಕೂಟದಲ್ಲಿ ಭಾರತ ಇದುವರೆಗೆ ಐದು ಚಿನ್ನ, ಒಂಬತ್ತು ಬೆಳ್ಳಿ ಮತ್ತು 11 ಕಂಚಿನ ಪದಕಗಳನ್ನು ಗೆದ್ದಿದೆ.

2022ರ ಏಷ್ಯನ್ ಗೇಮ್ಸ್‌ನಲ್ಲಿ ಇದೇ ವಿಭಾಗದಲ್ಲಿ ಪರ್ಮಾರ್ ಬೆಳ್ಳಿ ಪದಕ ಗೆದ್ದಿದ್ದರು. ಅವರು ಕ್ವಾರ್ಟರ್ ಫೈನಲ್‌ನಲ್ಲಿ ವೆನೆಜುವೆಲಾದ ಮಾರ್ಕೊ ಡೆನಿಸ್ ಬ್ಲಾಂಕೊ ಅವರನ್ನು 10–0 ರಿಂದ ಸೋಲಿಸಿದರು. ಆದರೆ ಸೆಮಿ-ಫೈನಲ್‌ನಲ್ಲಿ ಇರಾನ್‌ನ ಎಸ್ ಬನಿತಾಬಾ ಖೋರಮ್ ಅಬಾಡಿ ವಿರುದ್ಧ ಸೋತಿದ್ದರು. ಎರಡೂ ಪಂದ್ಯಗಳಲ್ಲಿ ಪರ್ಮಾರ್ ತಲಾ ಒಂದು ಹಳದಿ ಕಾರ್ಡ್ ಪಡೆದರು. ಕಪಿಲ್ ಚಿನ್ನ ತರಲು ಸಾಧ್ಯವಾಗದಿದ್ದರೂ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಅಂಧ ಅಥವಾ ಕಡಿಮೆ ದೃಷ್ಟಿ ಹೊಂದಿರುವ ಆಟಗಾರರು ಪ್ಯಾರಾ ಜೂಡೋದಲ್ಲಿ J1 ವಿಭಾಗದಲ್ಲಿ ಸ್ಪರ್ಧಿಸುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT