ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ 
ಕ್ರೀಡೆ

Paralympics 2024: ದಾಖಲೆಯ 29 ಪದಕ; ಭಾರತದ ಪ್ಯಾರಾಲಿಂಪಿಕ್ಸ್ ಅಭಿಯಾನ ಅಂತ್ಯ

ಪ್ಯಾರಾಲಿಂಪಿಕ್ಸ್​ ಇತಿಹಾಸದಲ್ಲಿ ಭಾರತ ಇಷ್ಟು ಸಂಖ್ಯೆಯ ಪದಕಗಳನ್ನು ಗೆದ್ದಿದ್ದು, ಇದೇ ಮೊದಲು.

ಪ್ಯಾರಿಸ್: ಪ್ಯಾರಿಸ್ ನಲ್ಲಿ ಮುಕ್ತಾಯವಾದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಐತಿಹಾಸಿಕ ಪ್ರದರ್ಶನ ನೀಡಿದ್ದು, ಇದೇ ಮೊದಲ ಬಾರಿಗೆ ಗರಿಷ್ಟ ಪದಕಗಳೊಂದಿಗೆ ಕ್ರೀಡಾಕೂಟದಲ್ಲಿ ತನ್ನ ಅಭಿಯಾನ ಮುಕ್ತಾಯಗೊಳಿಸಿದೆ.

ಹೌದು.. ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಪ್ರಯಾಣ ಅಂತ್ಯಗೊಂಡಿದೆ. ಅಥ್ಲೀಟ್ ಪೂಜಾ ಓಜಾ, ಮಹಿಳೆಯರ ಪ್ಯಾರಾ ಕ್ಯಾನೋ KL1 200 ಮೀಟರ್ ಸ್ಪರ್ಧೆಯ ಸೆಮಿಫೈನಲ್‌ನಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಫೈನಲ್‌ ರೇಸ್​ನಿಂದ ಹೊರಬಿದ್ದರು. ಇದರೊಂದಿಗೆ ಭಾರತದ ಅಭಿಯಾನವೂ ಕೊನೆಗೊಂಡಿತು.

ಅದಾಗ್ಯೂ ಈ ಬಾರಿಯ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತ ಇತಿಹಾಸ ಸೃಷ್ಟಿಸಿದ್ದು, ಈ ಬಾರಿಯ ಪ್ಯಾರಾಲಿಂಪಿಕ್ಸ್​ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತ ದಾಖಲೆಯ 29 ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಈ ಪೈಕಿ ಏಳು ಚಿನ್ನ, ಒಂಬತ್ತು ಬೆಳ್ಳಿ ಮತ್ತು 13 ಕಂಚು ಸೇರಿವೆ.

ವಾಸ್ತವವಾಗಿ ಪ್ಯಾರಾಲಿಂಪಿಕ್ಸ್​ ಇತಿಹಾಸದಲ್ಲಿ ಭಾರತ ಇಷ್ಟು ಸಂಖ್ಯೆಯ ಪದಕಗಳನ್ನು ಗೆದ್ದಿದ್ದು, ಇದೇ ಮೊದಲು. ಇದಕ್ಕೂ ಮೊದಲು ಟೊಕಿಯೋ ಪ್ಯಾರಾಲಿಂಪಿಕ್​ನಲ್ಲಿ 19 ಪದಕಗಳನ್ನು ಗೆದ್ದಿದ್ದು, ಭಾರತದ ಅತ್ಯುತ್ತಮ ಪ್ರದರ್ಶನವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ