ಭಾರತ ಹಾಕಿ ತಂಡ 
ಕ್ರೀಡೆ

Asian Champions Trophy: ದಕ್ಷಿಣ ಕೊರಿಯಾ ಮಣಿಸುವ ಮೂಲಕ ಸತತ ನಾಲ್ಕನೇ ಗೆಲುವು ದಾಖಲಿಸಿದ ಭಾರತ

ಹೀರೋ ಏಷ್ಯನ್ ಚಾಂಪಿಯನ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಭಾರತ ಇಂದು ನಡೆದ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯದಲ್ಲಿ 3-1 ಗೋಲುಗಳ ಅಂತರದಿಂದ ಗೆಲುವು ಸಾಧಿಸಿದೆ.

ಹೀರೋ ಏಷ್ಯನ್ ಚಾಂಪಿಯನ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಭಾರತ ಇಂದು ನಡೆದ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯದಲ್ಲಿ 3-1 ಗೋಲುಗಳ ಅಂತರದಿಂದ ಗೆಲುವು ಸಾಧಿಸಿದೆ.

ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರ ಎರಡು ಗೋಲುಗಳ ನೆರವಿನಿಂದ ಹಾಲಿ ಚಾಂಪಿಯನ್ ಭಾರತ ಗುರುವಾರ ಕೊರಿಯಾವನ್ನು 3-1 ಗೋಲುಗಳಿಂದ ಮಣಿಸಿತ್ತು. ಈ ಮೂಲಕ ಹೀರೋ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಸತತ ನಾಲ್ಕನೇ ಗೆಲುವು ದಾಖಲಿಸಿದೆ. ಪ್ಯಾರಿಸ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಭಾರತವು ಚೀನಾವನ್ನು 3-0, ಜಪಾನ್ 5-0 ಮತ್ತು ಮಲೇಷ್ಯಾವನ್ನು 8-1 ರಿಂದ ಸೋಲಿಸಿತು. ಸೆಮಿಫೈನಲ್ ಪ್ರವೇಶಿಸಿರುವ ಭಾರತ ತಂಡ ಇದೀಗ ಶನಿವಾರ ನಡೆಯಲಿರುವ ಕೊನೆಯ ಲೀಗ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಆರು ತಂಡಗಳ ಟೂರ್ನಿಯಲ್ಲಿ ಅಗ್ರ ನಾಲ್ಕು ತಂಡಗಳು ಸೋಮವಾರ ನಡೆಯಲಿರುವ ಸೆಮಿಫೈನಲ್‌ಗೆ ಅರ್ಹತೆ ಪಡೆಯಲಿದ್ದು, ಮಂಗಳವಾರ ಫೈನಲ್‌ ನಡೆಯಲಿದೆ.

ಭಾರತ ತನ್ನ ಅತ್ಯುತ್ತಮ ಫಾರ್ಮ್ ಅನ್ನು ಕಾಯ್ದುಕೊಂಡಿತ್ತು. ಮೊದಲ ಕ್ವಾರ್ಟರ್‌ನಲ್ಲಿ ಎರಡು ಗೋಲುಗಳ ಮುನ್ನಡೆ ಸಾಧಿಸಿತು. ಮಲೇಷ್ಯಾ ವಿರುದ್ಧ ಎರಡು ಗೋಲು ಗಳಿಸಿದ ಅರಿಜಿತ್ ಸಿಂಗ್ ಹುಂದಾಲ್ ಎಂಟನೇ ನಿಮಿಷದಲ್ಲಿ ಮೊದಲ ಗೋಲು ದಾಖಲಿಸಿದರು. ಇದರ ನಂತರ, ವಿಶ್ವದ ಅತ್ಯುತ್ತಮ ಡ್ರ್ಯಾಗ್-ಫ್ಲಿಕರ್‌ಗಳಲ್ಲಿ ಒಬ್ಬರಾದ ಹರ್ಮನ್‌ಪ್ರೀತ್ ಒಂಬತ್ತನೇ ಮತ್ತು 43ನೇ ನಿಮಿಷಗಳಲ್ಲಿ ಎರಡು ಪೆನಾಲ್ಟಿ ಕಾರ್ನರ್‌ಗಳನ್ನು ಗೋಲ್ ಆಗಿ ಪರಿವರ್ತಿಸಿದರು. ಕೊರಿಯಾ ಪರ ಜಿಹುನ್ ಯಾಂಗ್ 30ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಲ್ಲಿ ಏಕೈಕ ಗೋಲು ದಾಖಲಿಸಿದರು. ಭಾರತ ಮತ್ತೊಮ್ಮೆ ಆಕ್ರಮಣಕಾರಿಯಾಗಿ ಆರಂಭಿಸಿತು ಮತ್ತು ಸುಖ್ಜಿತ್ ಸಿಂಗ್ ನೀಡಿದ ಪಾಸ್ನಲ್ಲಿ ಅರಿಜಿತ್ ಮೊದಲ ಗೋಲು ಗಳಿಸಿದರು.

ಕೇವಲ ಒಂದು ನಿಮಿಷದ ನಂತರ, ಮಲೇಷ್ಯಾ ವಿರುದ್ಧ ಹ್ಯಾಟ್ರಿಕ್ ಗೋಲು ಗಳಿಸಿದ ರಾಜ್‌ಕುಮಾರ್ ಪಾಲ್, ಭಾರತಕ್ಕೆ ಪೆನಾಲ್ಟಿ ಕಾರ್ನರ್ ನೀಡಿದರು. ಅದರಲ್ಲಿ ಹರ್ಮನ್‌ಪ್ರೀತ್ ಗೋಲು ಗಳಿಸಿದರು. ಭಾರತದ ಮೀಸಲು ಗೋಲ್‌ಕೀಪರ್ ಸೂರಜ್ ಕರ್ಕೇರಾ ಆಕರ್ಷಕ ಪ್ರದರ್ಶನ ನೀಡಿ ಎರಡನೇ ಕ್ವಾರ್ಟರ್‌ನಲ್ಲಿ ಕೊರಿಯಾಗೆ ಗೋಲು ಗಳಿಸಲು ಅವಕಾಶ ನೀಡಲಿಲ್ಲ. ಎರಡನೇ ಕ್ವಾರ್ಟರ್‌ನಲ್ಲಿ ಭಾರತದ ಗೋಲಿನ ಮೇಲೆ ಕೊರಿಯಾ ಹಲವು ದಾಳಿಗಳನ್ನು ನಡೆಸಿತು. ಕೊನೆಯ ನಿಮಿಷದಲ್ಲಿ ಯಾಂಗ್ ಪೆನಾಲ್ಟಿ ಕಾರ್ನರ್‌ನಲ್ಲಿ ಗೋಲು ಗಳಿಸಿದರು. 35ನೇ ನಿಮಿಷದಲ್ಲಿ ಕೊರಿಯಾಗೆ ಸತತ ಎರಡು ಪೆನಾಲ್ಟಿ ಕಾರ್ನರ್ ಸಿಕ್ಕರೂ ಭಾರತದ ರಕ್ಷಣಾ ಪಡೆ ಸಿದ್ಧವಾಗಿತ್ತು. ಎರಡು ನಿಮಿಷಗಳ ನಂತರ ಭಾರತಕ್ಕೆ ಎರಡನೇ ಪೆನಾಲ್ಟಿ ಕಾರ್ನರ್ ಸಿಕ್ಕಿತು. ಆದರೆ ಗೋಲು ಗಳಿಸಲು ಸಾಧ್ಯವಾಗಲಿಲ್ಲ. ಹರ್ಮನ್‌ಪ್ರೀತ್ 43ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಗೋಲು ಗಳಿಸಿ ಭಾರತದ ಮುನ್ನಡೆಯನ್ನು 3-1ಕ್ಕೆ ಹೆಚ್ಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT