ಭಾರತ ಹಾಕಿ ತಂಡಕ್ಕೆ ಜಯ 
ಕ್ರೀಡೆ

Asian Champions Trophy: ಪಾಕಿಸ್ತಾನ ಬಗ್ಗು ಬಡಿದ ಭಾರತ, ಸೆಮೀಸ್ ಗೆ 'ಅಜೇಯ' ಲಗ್ಗೆ!

ಏಷ್ಯನ್ ಚಾಂಪಿಯನ್ಸ್‌ ಟ್ರೋಫಿ ಹಾಕಿ ಟೂರ್ನಿಯಲ್ಲಿ ಈಗಾಗಲೇ ಸೆಮಿಫೈನಲ್‌ ಸ್ಥಾನ ಕಾದಿರಿಸಿದ್ದ ಭಾರತ ಹಾಕಿ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸುವ ಮೂಲಕ ತನ್ನ ಅಜೇಯ ಓಟ ಮುಂದುವರಿಸಿದೆ.

ಬೀಜಿಂಗ್: ಏಷ್ಯನ್ ಚಾಂಪಿಯನ್ಸ್‌ ಟ್ರೋಫಿ ಹಾಕಿ ಟೂರ್ನಿಯಲ್ಲಿ ಇಂದು ಭಾರತ ತಂಡ ಪಾಕಿಸ್ತಾನ ತಂಡವನ್ನು ಭರ್ಜರಿಯಾಗಿ ಮಣಿಸಿ ಅಜೇಯವಾಗಿ ಟೂರ್ನಿಯ ಸೆಮೀಸ್ ಗೆ ಲಗ್ಗೆ ಇರಿಸಿದೆ.

ಹೌದು.. ಏಷ್ಯನ್ ಚಾಂಪಿಯನ್ಸ್‌ ಟ್ರೋಫಿ ಹಾಕಿ ಟೂರ್ನಿಯಲ್ಲಿ ಈಗಾಗಲೇ ಸೆಮಿಫೈನಲ್‌ಗೆ ಸ್ಥಾನ ಕಾದಿರಿಸಿದ್ದ ಭಾರತ ಹಾಕಿ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸುವ ಮೂಲಕ ತನ್ನ ಅಜೇಯ ಓಟವನ್ನು ಮುಂದುವರಿಸಿದೆ.

ಶನಿವಾರ ಚೀನಾದ ಮೊಕಿಯಲ್ಲಿ ನಡೆದ ಪಂದ್ಯದಲ್ಲಿ ಭಾರತ 2–1 ಗೋಲುಗಳಿಂದ ಪಾಕಿಸ್ತಾನ ತಂಡವನ್ನು ಸದೆಬಡಿಯಿತು. ಈ ಪಂದ್ಯದಲ್ಲಿ ಭಾರತದ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್‌ ಎರಡು ಗೋಲುಗಳನ್ನು ಹೊಡೆದು ತಂಡದ ಗೆಲುವಿಗೆ ಕಾರಣರಾದರು.

ಈ ಗೆಲುವಿನ ಮೂಲಕ ಭಾರತ ತಂಡ ಸತತ ಐದನೇ ಜಯ ದಾಖಲಿಸಿತು. ಇದರೊಂದಿಗೆ ಭಾರತ ಹಾಕಿ ತಂಡ ಅಜೇಯ ತಂಡವಾಗಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ಟೂರ್ನಿಯಲ್ಲಿ ಭಾರತ ತಂಡ ಒಂದೇ ಒಂದು ಪಂದ್ಯವನ್ನು ಸೋತಿಲ್ಲ.

ಪೆನಾಲ್ಟಿ ಕಾರ್ನರ್ ಮೂಲಕ 2 ಗೋಲು ಗಳಿಸಿದ ಭಾರತದ ನಾಯಕ ಹರ್ಮನ್‌ಪ್ರೀತ್ ಸಿಂಗ್ ತಂಡದ ಗೆಲುವಿನ ಹೀರೋ ಎನಿಸಿಕೊಂಡರೆ, ಆರಂಭದಲ್ಲೇ ಗೋಲು ದಾಖಲಿಸಿ ಭಾರತಕ್ಕೆ ತಿರುಗೇಟು ನೀಡಿದ್ದ ಪಾಕಿಸ್ತಾನ ಅಂತಿಮವಾಗಿ ಪಂದ್ಯವನ್ನು 2-1 ಅಂತರದಿಂದ ಕಳೆದುಕೊಂಡಿತು.

ಆರು ತಂಡಗಳಿರುವ ಕಣದಲ್ಲಿ ಭಾರತ ಆಡಿರುವ ಐದು ಪಂದ್ಯಗಳನ್ನು ಹೆಚ್ಚಿನ ಪ್ರಯಾಸವಿಲ್ಲದೇ ಗೆದ್ದುಕೊಂಡಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ನೇಪಾಳದಿಂದ ಭಾರತದ ವಿವಾದಿತ ಪ್ರದೇಶ ಒಳಗೊಂಡ ನಕ್ಷೆ ಇರುವ ಹೊಸ 100 ರೂ. ನೋಟು ಬಿಡುಗಡೆ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

SCROLL FOR NEXT