ಲಿಯೋನೆಲ್ ಮೆಸ್ಸಿ  online desk
ಕ್ರೀಡೆ

ನೀವು ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಭೇಟಿ ಮಾಡಬೇಕೆ? ಹಾಗಾದ್ರೆ 10 ಲಕ್ಷ ರೂ ಪಾವತಿಸಿ; ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ, ಕೋಲ್ಕತಾ, ಹೈದರಾಬಾದ್, ಮುಂಬೈ ಹಾಗೂ ದೆಹಲಿಗೆ ಭೇಟಿ ನೀಡಲಿದ್ದಾರೆ.

ಹೈದರಾಬಾದ್: ನೀವು ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರನ್ನು ಭೇಟಿಯಾಗಿ, ಶುಭ ಕೋರಲು ಬಯಸುವಿರಾ? ಹಾಗಾದ್ರೆ ನಿಮಗೆ ಒಂದು ಅವಕಾಶ ಇದೆ. ಫುಟ್ಬಾಲ್ ದಿಗ್ಗಜನೊಂದಿಗೆ 15 ನಿಮಿಷಗಳ ಸಮಯ ಕಳೆಯಲು ಮತ್ತು ಶುಭಾಶಯ ಕೋರಲು 10 ಲಕ್ಷ ರೂ. ಪಾವತಿಸಿ.

ಮೂರು ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿರುವ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ ಫುಟ್ಬಾಲ್ ಆಡದಿದ್ದರೂ ಅಥವಾ ಡಿಫೆಂಡರ್‌ಗಳನ್ನು ಡ್ರಿಬಲ್ ಮಾಡದಿದ್ದರೂ ಸಹ, ವಿಶ್ವಕಪ್ ವಿಜೇತ ನಾಯಕನನ್ನು ನೋಡಿ ಕಣ್ತುಂಬಿಕೊಳ್ಳುವ ಕ್ರೇಜ್ ಉತ್ತುಂಗಕ್ಕೇರಿದೆ.

ಲಿಯೋನೆಲ್ ಮೆಸ್ಸಿ, ಕೋಲ್ಕತಾ, ಹೈದರಾಬಾದ್, ಮುಂಬೈ ಹಾಗೂ ದೆಹಲಿಗೆ ಭೇಟಿ ನೀಡಲಿದ್ದಾರೆ. ಪ್ರತಿ ನಗರಗಳಲ್ಲೂ ವಿಶೇಷ ಹಾಗೂ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಲು ಆಯೋಜಕರು ಮುಂದಾಗಿದ್ದಾರೆ.

ಮೆಸ್ಸಿ ಡಿಸೆಂಬರ್ 14ರಂದು ಹೈದರಾಬಾದ್‌ನಲ್ಲಿ ಇರಲಿದ್ದು, 38,000 ಸೀಟ್ ಸಾಮರ್ಥ್ಯದ ಉಪ್ಪಲ್ ಕ್ರೀಡಾಂಗಣದಲ್ಲಿ ಮೆಸ್ಸಿ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ನಡುವಿನ 20 ನಿಮಿಷಗಳ ಪಂದ್ಯ ಸೇರಿದಂತೆ ಸಂಜೆ 3 ಗಂಟೆಗಳ ಕಾಲ ವಿಶೇಷ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಟಿಕೆಟ್ ಬೆಲೆ 2250 ರೂ.ಗಳಿಂದ 9000 ರೂ.ಗಳವರೆಗೆ ಇದ್ದರೂ ಈಗಾಗಲೇ ಟಿಕೆಟ್ ಸೋಲ್ಡ್ ಔಟ್ ಆಗಿವೆ.

ಮೆಸ್ಸಿ ಅವರ ಭಾರತ ಭೇಟಿ ಶುಕ್ರವಾರ ಕೋಲ್ಕತ್ತಾದಲ್ಲಿ ಆರಂಭವಾಗಲಿದ್ದು, ಡಿಸೆಂಬರ್ 15 ರಂದು ಮುಂಬೈ ಮತ್ತು ನವದೆಹಲಿಗೆ ಹಾರುವ ಮೊದಲು ಹೈದರಾಬಾದ್‌ನಲ್ಲಿ ತಂಗಲಿದ್ದಾರೆ.

ಹೈದರಾಬಾದ್‌ನ ಫಲಕ್ನುಮಾ ಅರಮನೆಯಲ್ಲಿ ಮೆಸ್ಸಿ ಜೊತೆ ಫೋಟೋಶೂಟ್‌ಗೆ ಅವಕಾಶ ಕಲ್ಪಿಸಲಾಗಿದೆ. ಇದರ ಟಿಕೆಟ್‌ಗೆ 9.95 ಲಕ್ಷ ರೂ. ಇದ್ದು, ಜಿಎಸ್‌ಟಿ ಸೇರಿದಂತೆ 10 ಲಕ್ಷಕ್ಕೂ ಹೆಚ್ಚಾಗುತ್ತದೆ. ಟಿಕೆಟ್‌ಗಳನ್ನು ಡಿಸ್ಟ್ರಿಕ್ಟ್‌ ಆ್ಯಪ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಭಾರತದಲ್ಲಿ ಕಳೆದ 8 ತಿಂಗಳಲ್ಲಿ 254 ಹಿಂದೂಗಳು ಮುಸ್ಲಿಂ ಜಿಹಾದಿ ಹಿಂಸಾಚಾರಕ್ಕೆ ಬಲಿ; ಎಲ್ಲಿದೆ ನ್ಯಾಯ? VHP

ರೋಡ್‌ಶೋ ವೇಳೆ 'ಸಿಗ್ಮಾ' ಫ್ರೇಮ್ ಎತ್ತಿಹಿಡಿದ ತಮಿಳುನಾಡು CM ವಿಜಯ್; ಮಗನ ಸಿನಿಮಾಗೆ ತಂದೆಯ ಬೆಂಬಲ! ವಿಡಿಯೋ ವೈರಲ್

ಭಾರತೀಯ ವಾಯುಪಡೆಗೆ ವರ್ಷಕ್ಕೆ 36-40 ಹೊಸ ಯುದ್ಧ ವಿಮಾನಗಳ ಅಗತ್ಯ: ವಾಯುಸೇನಾ ಮುಖ್ಯಸ್ಥ

ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಹಣೆಗೆ ಮುತ್ತಿಟ್ಟ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?