ಪ್ರಕಾಶ್ ಪಡುಕೋಣೆ ಜೊತೆಗೆ ದೀಪಿಕಾ ಪಡುಕೋಣೆ 
ಕ್ರೀಡೆ

ಕ್ರೀಡಾ ಕ್ಷೇತ್ರಕ್ಕೂ ಕಾಲಿಟ್ಟ ದೀಪಿಕಾ: ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 'ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್' ಆರಂಭ!

ದಿಗ್ಗಜ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರ ಪುತ್ರಿಯಾಗಿರುವ ದೀಪಿಕಾ ಪಡುಕೋಣೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರು: ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಕ್ರೀಡಾ ಕ್ಷೇತ್ರಕ್ಕೆ ಕಾಲಿಡುತ್ತಿದ್ದಾರೆ. ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ (PSB)ಪ್ರಾರಂಭಿಸುವುದಾಗಿ ಮಂಗಳವಾರ ಘೋಷಿಸಿದ್ದಾರೆ.

ದಿಗ್ಗಜ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರ ಪುತ್ರಿಯಾಗಿರುವ ದೀಪಿಕಾ ಪಡುಕೋಣೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಬ್ಯಾಡ್ಮಿಂಟನ್ ಆಡುತ್ತಾ ಬೆಳೆದವನಾಗಿ, ಈ ಕ್ರೀಡೆಯು ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕವಾಗಿ ಒಬ್ಬರ ಜೀವನವನ್ನು ಹೇಗೆ ರೂಪಿಸುತ್ತದೆ ಎಂಬುದನ್ನು ನೇರವಾಗಿ ಅನುಭವಿಸಿದ್ದೇನೆ. ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ (ಪಿಎಸ್‌ಬಿ) ಮೂಲಕ ಎಲ್ಲಾ ವರ್ಗದ ಜನರಲ್ಲಿ ಸಂತೋಷ, ಶಿಸ್ತನ್ನು ಮೂಡಿಸಲು ಹಾಗೂ ಆರೋಗ್ಯದತ್ತ ಗಮನ ಹರಿಸುವ, ಕ್ರೀಡೆಯಿಂದ ಪ್ರೇರಿತವಾದ ಪೀಳಿಗೆಯನ್ನು ನಿರ್ಮಿಸಲು ನಾವು ಆಶಿಸುತ್ತೇವೆ" ಎಂದು ಅವರು ಬರೆದುಕೊಂಡಿದ್ದಾರೆ.

ಆರಂಭದಲ್ಲಿ ಬೆಂಗಳೂರು ಸೇರಿದಂತೆ ದೇಶದ 18 ನಗರಗಳಲ್ಲಿ 75 ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಈ ವರ್ಷದೊಳಗೆ 100 ಕೇಂದ್ರಗಳು, ಮೂರು ವರ್ಷಗಳಲ್ಲಿ 250 ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ