ಅಣ್ಣಾಮಲೈ-ತೇಜಸ್ವಿ ಸೂರ್ಯ 
ಕ್ರೀಡೆ

Ironman Challenge: ಅಣ್ಣಾಮಲೈ ಭಾಗಿ; ಸತತ 2ನೇ ಬಾರಿಗೆ ಸಂಸದ ಸೂರ್ಯ ಐರನ್‌ಮ್ಯಾನ್ ಸಾಧನೆ!

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಸತತ ಎರಡನೇ ವರ್ಷವೂ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ.

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಸತತ ಎರಡನೇ ವರ್ಷವೂ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ. ಈ ವರ್ಷದ ಐರನ್ ಮ್ಯಾನ್ ನಲ್ಲಿ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಸಹ ಭಾಗವಹಿಸಿದ್ದು ವಿಶೇಷ.

ಸಂಸದ ಸೂರ್ಯ ಅವರು ಸ್ಪರ್ಧೆಯ ಮೂರು ಕಠಿಣ ಹಂತಗಳಾದ – 1.9 ಕಿ.ಮೀ ಈಜು, 90 ಕಿ.ಮೀ ಸೈಕ್ಲಿಂಗ್, ಮತ್ತು 21.1 ಕಿ.ಮೀ ಓಟವನ್ನು 7 ಗಂಟೆ 49 ನಿಮಿಷಗಳಲ್ಲಿ ಪೂರ್ಣಗೊಳಿಸಿದ್ದು ಇದರಲ್ಲಿ, ಈಜಲು ಸುಮಾರು 44 ನಿಮಿಷಗಳು, ಸೈಕ್ಲಿಂಗ್‌ಗೆ 3 ಗಂಟೆ 47 ನಿಮಿಷಗಳು ಮತ್ತು ಓಟಕ್ಕೆ 2 ಗಂಟೆ 54 ನಿಮಿಷಗಳನ್ನು ತೆಗೆದುಕೊಂಡರು. ಮತ್ತೊಂದೆಡೆ, ಅಣ್ಣಾಮಲೈ ಅವರು ಈ ಓಟವನ್ನು 8 ಗಂಟೆ 13 ನಿಮಿಷಗಳಲ್ಲಿ ಪೂರ್ಣಗೊಳಿಸಿದರು.

50ಕ್ಕೂ ಹೆಚ್ಚು ದೇಶಗಳ ಕ್ರೀಡಾಪಟುಗಳನ್ನು ಆಕರ್ಷಿಸುವ ಐರನ್‌ಮ್ಯಾನ್ 70.3 ಗೋವಾ, ಭಾರತದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಇದು ದೈಹಿಕ ಮತ್ತು ಮಾನಸಿಕ ಸಾಮರ್ಥ್ಯದ ಅಂತಿಮ ಪರೀಕ್ಷೆಯಾಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಸುಧಾರಿಸಲು ನಾನು ಕಠಿಣ ತರಬೇತಿ ಪಡೆದಿದ್ದು, ಈ ಸವಾಲನ್ನು ಪೂರ್ಣಗೊಳಿಸಿರುವುದಕ್ಕೆ ನನಗೆ ಸಂತೋಷವಾಗಿದೆ ತೇಜಸ್ವಿ ಸೂರ್ಯ ಎಂದರು.

'ಎಕ್ಸ್' (X) ನಲ್ಲಿ ಪೋಸ್ಟ್ ಮಾಡಿದ ಸೂರ್ಯ ಅವರು, ನನ್ನ ಆತ್ಮೀಯ ಸಹೋದರ ಅಣ್ಣಾಮಲೈ ಅವರೊಂದಿಗೆ ಭಾಗವಹಿಸಿದ್ದರಿಂದ ನನ್ನ ಎರಡನೇ ಐರನ್‌ಮ್ಯಾನ್ 70.3 ಗೆ ಒಂದು ಬಲವಾದ ಮುಕ್ತಾಯ ಸಿಕ್ಕಿದೆ. ಸಾವಿರಾರು ಜನರು ಉತ್ಸಾಹದಿಂದ ಭಾಗವಹಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ #FitIndia ಕರೆ ಯುವಕರಲ್ಲಿ ಆರೋಗ್ಯ, ಶಿಸ್ತು ಮತ್ತು ದೃಢ ಸಂಕಲ್ಪದ ಅಲೆಯನ್ನು ಪ್ರೇರೇಪಿಸುತ್ತಿದೆ. ಈ ಪ್ರಯಾಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ #FitIndia ಉಪಕ್ರಮವು ಸ್ಫೂರ್ತಿಯಾಗಿದೆ. ಇದು ನನ್ನ ವೈಯಕ್ತಿಕ ಫಿಟ್‌ನೆಸ್ ಗುರಿಗಳ ಬಗ್ಗೆ ಆಳವಾಗಿ ಯೋಚಿಸಲು ಪ್ರೋತ್ಸಾಹಿಸಿತು.

ದೊಡ್ಡ ಮಹತ್ವಾಕಾಂಕ್ಷೆಗಳನ್ನು ಹೊಂದಿರುವ ಯುವ ರಾಷ್ಟ್ರವಾಗಿ, ನಾವು ಆರೋಗ್ಯಕರ ಮತ್ತು ದೈಹಿಕ ಸಾಮರ್ಥ್ಯಕ್ಕೆ ಆದ್ಯತೆ ನೀಡಬೇಕು. ಫಿಟ್‌ನೆಸ್‌ನ ಅನ್ವೇಷಣೆಯು ಶಿಸ್ತು ಮತ್ತು ಆತ್ಮವಿಶ್ವಾಸವನ್ನು ತುಂಬುತ್ತದೆ. ಇವು ಯಾವುದೇ ಕ್ಷೇತ್ರದಲ್ಲಿ ಯಶಸ್ಸನ್ನು ವ್ಯಾಖ್ಯಾನಿಸುವ ಗುಣಗಳು ಎಂದರು. ಎಲ್ಲ ಯುವಕರು ಮುಂದೆ ಬಂದು ಕ್ರೀಡೆಯನ್ನು ಅಳವಡಿಸಿಕೊಂಡು, ತಮ್ಮದೇ ಆದ ಫಿಟ್‌ನೆಸ್ ಪ್ರಯಾಣವನ್ನು ಪ್ರಾರಂಭಿಸಲು ನಾನು ಒತ್ತಾಯಿಸುತ್ತೇನೆ ಎಂದು ಸೂರ್ಯ ವಿವರಿಸಿದರು.

ಓಟದ ನಂತರ ಮಾತನಾಡಿದ ಅಣ್ಣಾಮಲೈ

ಭಾಗವಹಿಸಿದ ಪ್ರತಿಯೊಬ್ಬರೂ ಚಾಂಪಿಯನ್ ಆಗಿದ್ದಾರೆ. ಇದು ದೃಢತೆ ಮತ್ತು ಶಿಸ್ತನ್ನು ಪ್ರದರ್ಶಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ಫಿಟ್ ಇಂಡಿಯಾ ದೃಷ್ಟಿ ವಾಸ್ತವದಿಂದ ದೂರವಿಲ್ಲ. ಹೆಚ್ಚು ಹೆಚ್ಚು ಯುವಕರು ಫಿಟ್‌ನೆಸ್ ಅನ್ನು ಆದ್ಯತೆಯಾಗಿ ಮತ್ತು ತಮ್ಮ ದೈನಂದಿನ ದಿನಚರಿಯ ಭಾಗವಾಗಿ ಮಾಡುತ್ತಿದ್ದಾರೆ ಎಂದು ಹೇಳಿದರು. ಐರನ್‌ಮ್ಯಾನ್ 70.3 ಗೋವಾ ಏಷ್ಯಾದ ಅತ್ಯಂತ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಇದು ಕೇವಲ ವೈಯಕ್ತಿಕ ಸಾಧನೆಯ ಸಂಕೇತವಲ್ಲದೆ. ಭಾರತದ ಯುವಜನರಲ್ಲಿ ಬೆಳೆಯುತ್ತಿರುವ ಫಿಟ್‌ನೆಸ್ ಮತ್ತು ಸ್ವಾಸ್ಥ್ಯ ಸಂಸ್ಕೃತಿಯನ್ನು ಸಹ ಬಿಂಬಿಸುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಲ್.ಕೆ ಅಡ್ವಾಣಿ ಹೊಗಳಿದ ಶಶಿ ತರೂರ್; ಅಂತರ ಕಾಯ್ದುಕೊಂಡ ಕಾಂಗ್ರೆಸ್

Bihar Polls 2025: ಯಾರಿಗೆ ಬಿಹಾರ? ಮತ್ತೆ ಮಹಿಳಾ ಮತದಾರರು ನಿರ್ಧರಿಸಲಿದ್ದಾರೆಯೇ?

RSS ದೇಣಿಗೆ ಕುರಿತು ಮೋಹನ್ ಭಾಗವತ್ ಗೆ 11 ಪ್ರಶ್ನೆ ಕೇಳಿದ ಸಚಿವ ಪ್ರಿಯಾಂಕ್ ಖರ್ಗೆ

ಕೂಡ್ಲಿಗಿ: ಏಳನೇ 'ಗ್ಯಾರಂಟಿ'ಯಾಗಿ ಕೆರೆಗಳಿಗೆ ನೀರು! ಡಿಸಿಎಂ ಡಿ.ಕೆ ಶಿವಕುಮಾರ್

ಉತ್ತರಾಖಂಡದಲ್ಲಿ 8,000 ಕೋಟಿ ರೂ ಯೋಜನೆಗಳಿಗೆ ಮೋದಿ ಚಾಲನೆ; 'ವಿಶ್ವದ ಆಧ್ಯಾತ್ಮಿಕ ರಾಜಧಾನಿ' ಮಾಡುವ ಗುರಿ

SCROLL FOR NEXT