ಚಾಂಪಿಯನ್ ಭಾರತ ಹಾಕಿ ತಂಡ 
ಕ್ರೀಡೆ

Hockey Asia Cup 2025: ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾ ವಿರುದ್ಧ ಭಾರತ 4-1 ಗೆಲುವು; 8 ವರ್ಷಗಳ ಬಳಿಕ ಪ್ರಶಸ್ತಿ, ವಿಶ್ವಕಪ್ ಗೆ ಅರ್ಹತೆ!

ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದ್ದ ಭಾರತ ತಂಡ 8 ವರ್ಷಗಳ ಬಳಿಕ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ.

ನವದೆಹಲಿ: ಏಷ್ಯಾಕಪ್ ಹಾಕಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಇತಿಹಾಸ ಬರೆದಿದ್ದು ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾವನ್ನು ಮಣಿಸಿ 8 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿದೆ.

ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ 2025 ರ ಹಾಕಿ ಏಷ್ಯಾಕಪ್ (Hockey Asia Cup 2025) ಫೈನಲ್​ನಲ್ಲಿ ಹರ್ಮನ್​​ಪ್ರೀತ್ ಸಿಂಗ್ (Harmanpreet Singh) ನಾಯಕತ್ವದ ಭಾರತ ಹಾಕಿ ತಂಡವು, ದಕ್ಷಿಣ ಕೊರಿಯಾ ತಂಡವನ್ನು 4-1 ಗೋಲುಗಳಿಂದ ಮಣಿಸಿ ಪ್ರಶಸ್ತಿ ಗೆದ್ದುಕೊಂಡಿದೆ.

ಈ ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದ್ದ ಭಾರತ ತಂಡ 8 ವರ್ಷಗಳ ಬಳಿಕ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ.

ಸಂಪೂರ್ಣ ಪ್ರಾಬಲ್ಯ ಮೆರೆದ ಭಾರತ

ಟೂರ್ನಿಯ ಸೂಪರ್ 4 ಸುತ್ತಿನಲ್ಲಿ ಇದೇ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯವನ್ನು 2-2 ರಿಂದ ಡ್ರಾ ಮಾಡಿಕೊಂಡಿದ್ದ ಭಾರತ ಹಾಕಿ ತಂಡ ಫೈನಲ್ ಪಂದ್ಯದಲ್ಲಿ ದಕ್ಷಿಣ ಕೊರಿಯಾ ಮೇಲೆ ಅಕ್ಷರಶಃ ಸವಾರಿ ಮಾಡಿತು. ಕೊರಿಯಾ ತಂಡಕ್ಕೆ ಯಾವುದೇ ಅವಕಾಶ ನೀಡದ ಭಾರತ ತಂಡ ಏಕಪಕ್ಷೀಯವಾಗಿ ಪಂದ್ಯವನ್ನು ಗೆದ್ದುಕೊಂಡಿತು.

ನಾಲ್ಕನೇ ಬಾರಿಗೆ ಚಾಂಪಿಯನ್

9ನೇ ಫೈನಲ್ ಆಡುವ ಮೂಲಕ ಭಾರತ ತಂಡ ನಾಲ್ಕನೇ ಬಾರಿಗೆ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಟೀಂ ಇಂಡಿಯಾ ಕೊನೆಯ ಬಾರಿಗೆ 8 ವರ್ಷಗಳ ಹಿಂದೆ ಅಂದರೆ 2017 ರಲ್ಲಿ ಪ್ರಶಸ್ತಿ ಗೆದ್ದಿತ್ತು. ಈ ಟೂರ್ನಿಯಲ್ಲಿ ಅತ್ಯಂತ ಯಶಸ್ವಿ ತಂಡವಾಗಿರುವ ದಕ್ಷಿಣ ಕೊರಿಯಾ 5 ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಇದಕ್ಕೂ ಮೊದಲು, ಉಭಯ ದೇಶಗಳ ನಡುವೆ 3 ಫೈನಲ್‌ಗಳು ನಡೆದಿದ್ದು, ಅದರಲ್ಲಿ 2 ರಲ್ಲಿ ದಕ್ಷಿಣ ಕೊರಿಯಾ ಮತ್ತು ಒಂದು ಪಂದ್ಯದಲ್ಲಿ ಭಾರತ ಜಯಗಳಿಸಿದೆ.

ವಿಶ್ವಕಪ್ ಗೆ ಅರ್ಹತೆ

ಈ ಗೆಲುವಿನೊಂದಿಗೆ, ಭಾರತ ತಂಡ ನೆದರ್ಲ್ಯಾಂಡ್ಸ್ ಮತ್ತು ಬೆಲ್ಜಿಯಂನಲ್ಲಿ ನಡೆಯಲಿರುವ 2026 ರ FIH ಪುರುಷರ ವಿಶ್ವಕಪ್​ಗೆ ನೇರವಾಗಿ ಅರ್ಹತೆ ಪಡೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಫಾರಂ-7 ದುರ್ಬಳಕೆ ಆರೋಪ: ಕ್ರಮಕ್ಕೆ ಚು.ಆಯೋಗ ಸೂಚನೆ, ಐತಿಹಾಸಿಕ ದಿನ ಎಂದ ಸಿಎಂ ಡಿಕೆಶಿ

‘ನಿಮ್ಮ ಪ್ರಾರ್ಥನೆಗೆ ಧನ್ಯವಾದ’: ಭಾರತದ ಹೀರೋ ಪೈಲಟ್ ಸ್ಮಿತ್ ಮಚ್ಚರ್ ಅಪಾಯದಿಂದ ಪಾರು!

ರಕ್ತದ ಮಡುವಿನಲ್ಲಿ ಪೈಲಟ್`ಗಳು, ಫ್ಲೈಟ್ ಲ್ಯಾಂಡ್ ಮಾಡಿದ ಪ್ಲಂಬರ್; FlyDubai ವಿಮಾನ ಪತನವಾಗದಿದ್ದದ್ದೇ ಅಚ್ಚರಿ!

ICC Cricket World Cup 2027 ವೇಳಾಪಟ್ಟಿ; ಅ.7ರಿಂದ ಭಾರತದ ಅಭಿಯಾನ ಆರಂಭ, 3 ಬಾರಿ ಬದ್ಧ ಶತ್ರುಗಳ ಕದನ?

‘ನೈಸ್ ಅಕ್ರಮ ಮರೆಮಾಚಲು ಈ ಡ್ರಾಮಾ’: ಚುನಾವಣಾ ಆಯೋಗದ ಮುಂದೆ ಸಿಎಂ, ಸಚಿವರ ಧರಣಿಗೆ ಕುಮಾರಸ್ವಾಮಿ ಕಿಡಿ