ಪ್ರಜ್ಞಾನಂದ 
ಕ್ರೀಡೆ

ನಾರ್ವೆ ಚೆಸ್ ಟೂರ್ನಿ: ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಗೆದ್ದು ಇತಿಹಾಸ ಬರೆದ ಪ್ರಜ್ಞಾನಂದ!

ಭಾರತದ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಮತ್ತು ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಸೇರಿದಂತೆ ಯಾರಿಗೂ ಸಾಧ್ಯವಾಗದ ಅಪರೂಪದ ಸಾಧನೆಯನ್ನು ಚೆನ್ನೈ ಮೂಲದ 20 ವರ್ಷದ ಪ್ರಜ್ಞಾನಂದ ಮಾಡಿದ್ದಾರೆ.

ಓಸ್ಲೋ: ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್‌.ಪ್ರಜ್ಞಾನಂದ ಅವರು ನಾರ್ವೆ ಚೆಸ್‌ ಟೂರ್ನಿಯ ಅಂತಿಮ ಸುತ್ತಿನ ಪಂದ್ಯದಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಪ್ರತಿಷ್ಠಿತ ನಾರ್ವೆ ಚೆಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಭಾರತದ ಮೊದಲ ಆಟಗಾರ ಎಂಬ ಹಿರಿಮೆ ಅವರದ್ದಾಗಿದೆ.

ದಿನದ ಆರಂಭದಲ್ಲಿ 15 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದ ಪ್ರಜ್ಞಾನಂದ, ನಿರ್ಣಾಯಕ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟು 18 ಅಂಕಗಳನ್ನು ಗಳಿಸಿ ಅಗ್ರಸ್ಥಾನಕ್ಕೇರಿದರು.

ಭಾರತದ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಮತ್ತು ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಸೇರಿದಂತೆ ಯಾರಿಗೂ ಸಾಧ್ಯವಾಗದ ಅಪರೂಪದ ಸಾಧನೆಯನ್ನು ಚೆನ್ನೈ ಮೂಲದ 20 ವರ್ಷದ ಪ್ರಜ್ಞಾನಂದ ಮಾಡಿದ್ದಾರೆ.

ಟೂರ್ನಿಯ ಆರಂಭದಲ್ಲಿ ಪ್ರಜ್ಞಾನಂದ ಅವರು ಆರು ಗಣ್ಯ ಆಟಗಾರರ ಎದುರು ನಿಧಾನಗತಿಯ ಮುನ್ನಡೆ ಪಡೆದಿದ್ದರು. ಆದರೆ, ಟೂರ್ನಿಯ ದ್ವಿತೀಯಾರ್ಧದಲ್ಲಿ ಭರ್ಜರಿ ವೇಗ ಪಡೆದುಕೊಂಡರು. ಏಳು ಬಾರಿಯ ನಾರ್ವೆ ಚೆಸ್ ಚಾಂಪಿಯನ್ ಮತ್ತು ವಿಶ್ವದ ನಂ. 1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಎರಡು ಬಾರಿ ಸೋಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ; ರಾಡಾರ್ ಕೇಂದ್ರಗಳ ಮೇಲೆ ಭಾರೀ ದಾಳಿ, ಹಾರ್ಮುಜ್ ಜಲಸಂಧಿ ಬಳಿ ಉದ್ವಿಗ್ನತೆ ಹೆಚ್ಚಳ..!

‘ನೀವು ಇಂಡಿಯಾದವರಾ?’: ಭಾರತೀಯ ಪತ್ರಕರ್ತನಿಗೆ ಟ್ರಂಪ್ ಪ್ರಶ್ನೆ, ಭಾರೀ ವಿವಾದ

ಆರು ವರ್ಷಗಳಲ್ಲಿ ದುಪ್ಪಟ್ಟಾಯ್ತು ಮಲ್ಲಿಕಾರ್ಜುನ ಖರ್ಗೆ ಆಸ್ತಿ: AICC ಅಧ್ಯಕ್ಷ ಎಷ್ಟು ಕೋಟಿಯ ಒಡೆಯ?

ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!

BJP ತೊರೆದ ಬೆನ್ನಲ್ಲೇ ಅಣ್ಣಾಮಲೈ ಸಂಚಲನ: 'We The Leaders' ಆಂದೋಲನಕ್ಕೆ ಕೆಲ ಗಂಟೆಯಲ್ಲೇ 10 ಲಕ್ಷಕ್ಕೂ ಹೆಚ್ಚು ಸ್ವಯಂಸೇವಕರ ನೋಂದಣಿ!

SCROLL FOR NEXT