ಬ್ಯಾಸ್ಕೆಟ್‌ಬಾಲ್ ತಂಡ 
ಕ್ರೀಡೆ

Israel-Iran war: Dohaದಲ್ಲಿ ಸಿಲುಕಿದ Indian basketball team; ತಂಡದಲ್ಲಿ ಮೂವರು ಕನ್ನಡಿಗರು!

ಪ್ರಾದೇಶಿಕ ಯುದ್ಧ ಪರಿಸ್ಥಿತಿಯಿಂದಾಗಿ ವಾಯು ಮಾರ್ಗ ಮುಚ್ಚಿರುವ ಹಿನ್ನೆಲೆ ತಂಡದ ಆಟಗಾರರು ಮತ್ತು ಅಧಿಕಾರಿಗಳು ಭಾರತಕ್ಕೆ ಮರಳಲು ಸಾಧ್ಯವಾಗಿಲ್ಲ.

ಬೆಂಗಳೂರು: ಎಫ್ಐಬಿಎ (ಫೆಡರೇಶನ್ ಇಂಟರ್ ನ್ಯಾಷನಲ್ ಬ್ಯಾಸ್ಕೆಟ್ ಬಾಲ್) ವಿಶ್ವಕಪ್ 2027 ರ ಏಷ್ಯನ್ ಅರ್ಹತಾ ಪಂದ್ಯಗಳಲ್ಲಿ ಭಾಗವಹಿಸಿದ್ದ ಭಾರತ ಪುರುಷರ ಬ್ಯಾಸ್ಕೆಟ್‌ಬಾಲ್ ತಂಡವು ದೋಹಾದಲ್ಲಿ ಸಂಕಷ್ಟಕ್ಕೆ ಸಿಲುಕಿದೆ.

ಪ್ರಾದೇಶಿಕ ಯುದ್ಧಸಮಾನ ಪರಿಸ್ಥಿತಿಯಿಂದ ವಾಯು ಮಾರ್ಗ ಮುಚ್ಚಿರುವ ಹಿನ್ನೆಲೆ ತಂಡದ ಆಟಗಾರರು ಮತ್ತು ಅಧಿಕಾರಿಗಳು ಭಾರತಕ್ಕೆ ಮರಳಲು ಸಾಧ್ಯವಾಗಿಲ್ಲ.

ಎಂಎಲ್ಸಿ ಹಾಗೂ ಎಫ್ಐಬಿಎ ಏಷ್ಯಾ ಅಧ್ಯಕ್ಷರಾದ ಕೆ.ಗೋವಿಂದರಾಜ್ ಅವರು ಮಂಗಳವಾರ ಮಾಹಿತಿ ನೀಡಿ, ಸಂಕಷ್ಟದಲ್ಲಿರುವ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರೂ ಇದ್ದಾರೆ ಎಂದು ತಿಳಿಸಿದ್ದಾರೆ.

ದೋಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಕತಾರ್ ಬ್ಯಾಸ್ಕೆಟ್‌ಬಾಲ್ ಫೆಡರೇಶನ್‌ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಟಗಾರರ ಸುರಕ್ಷತೆ ಕುರಿತು ಮನವಿ ಮಾಡಲಾಗಿದೆ. ಪ್ರಸ್ತುತ ನೆಲಮಟ್ಟದ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ. ಆದರೆ, ವಾಯು ಮಾರ್ಗ ತೆರೆಯುವವರೆಗೂ ತಂಡವನ್ನು ಭಾರತಕ್ಕೆ ಕಳುಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಇದೀಗ ಕತಾರ್ ಬ್ಯಾಸ್ಕೆಟ್‌ಬಾಲ್ ಫೆಡರೇಶನ್ ಭಾರತೀಯ ತಂಡಕ್ಕೆ ಹೋಟೆಲ್ ವಸತಿ ವ್ಯವಸ್ಥೆ ಮಾಡಿ, ಅಗತ್ಯ ಸೌಲಭ್ಯಗಳನ್ನು ಒದಗಿಸಿದೆ. ಭಾರತಕ್ಕೆ ವಿಮಾನ ಸೇವೆಗಳು ಪ್ರಾರಂಭವಾದ ಕೂಡಲೇ ತಂಡವನ್ನು ಮರಳಿ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆಂದು ಹೇಳಿದ್ದಾರೆ.

ಇದೇ ವೇಳೆ ಕರ್ನಾಟಕ ಸಂಘ ಕತಾರ್ (KSQ) ಮತ್ತು ಕರ್ನಾಟಕ ಕನ್ನಡ ಸಂಘ ಕತಾರ್ ಸದಸ್ಯರು ಸಂಕಷ್ಟದಲ್ಲಿರುವ ಕನ್ನಡಿಗರಿಗೆ ನೆರವಾಗುತ್ತಿದ್ದು, ಆಹಾರ, ವಸತಿ ಹಾಗೂ ಅಗತ್ಯ ಸಹಾಯಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಗೋವಿಂದರಾಜ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ