ಅಮನ್ 
ಕ್ರೀಡೆ

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

ಇದರ ಬೆನ್ನಲ್ಲೇ ಪುರುಷರ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಕುಸ್ತಿಪಟು ಅಮನ್ ಸೆಹ್ರಾವತ್ ಅವರು ದೇಶಕ್ಕೆ 20ನೇ ಚಿನ್ನದ ಪದಕವನ್ನು ತಂದುಕೊಟ್ಟಿದ್ದಾರೆ.

ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಕ್ರಿಕೆಟ್ ವಿಭಾಗದಲ್ಲಿ ಭಾರತ, ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಬಗ್ಗು ಬಡಿದು ಚಿನ್ನದ ಪದಕ ಬಾಚಿಕೊಂಡಿದೆ.

ಇದರ ಬೆನ್ನಲ್ಲೇ ಪುರುಷರ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಕುಸ್ತಿಪಟು ಅಮನ್ ಸೆಹ್ರಾವತ್ ಅವರು ದೇಶಕ್ಕೆ 20ನೇ ಚಿನ್ನದ ಪದಕವನ್ನು ತಂದುಕೊಟ್ಟಿದ್ದಾರೆ.

ಪಂದ್ಯ ಮುಗಿಯಲು ಒಂದು ನಿಮಿಷಕ್ಕಿಂತ ಕಡಿಮೆ ಸಮಯವಿದ್ದಾಗ ಅಮನ್ 7-6 ಅಂತರದಿಂದ ಹಿನ್ನಡೆಯಲ್ಲಿದ್ದರು; ಆದರೆ, ಸತತ ಐದು ಅಂಕಗಳನ್ನು ಗಳಿಸುವ ಮೂಲಕ ಪಂದ್ಯದ ಚಿತ್ರಣವನ್ನೇ ಬದಲಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ಉತ್ತರ ಕೊರಿಯಾದ ಸಾಂಗ್ ಹ್ಯಾನ್ ಅವರ ವಿರುದ್ಧ 11-07 ಅಂತರದಿಂದ ಜಯ ಸಾಧಿಸುವ ಮೂಲಕ ಅಮನ್ ಚಿನ್ನದ ಪದಕ ಗೆದ್ದರು.

ಅಮನ್ ಸೆಹ್ರಾವತ್ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತ ಇಂದು ಒಟ್ಟು 4 ಚಿನ್ನದ ಪದಕ ಸೇರಿ 20 ಗೋಲ್ಡ್‌ ಮೆಡಲ್‌ ಗೆದ್ದುಕೊಂಡಿದೆ. ಗಾಲ್ಫ್‌ನಲ್ಲಿ ಮೈಸೂರಿನ ಪ್ರಣವಿ ಅರಸ್‌, ರಿಕರ್ವ್‌ ಅರ್ಚರಿಯಲ್ಲಿ ಕುಂಕುಮ್‌, ಕ್ರಿಕೆಟ್‌ನಲ್ಲಿ ಭಾರತ ಪುರುಷರ ತಂಡ ಚಿನ್ನದ ಪದಕವನ್ನು ಗೆದ್ದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!

'ಅಸಹ್ಯ, ವಿಕೃತ, ನಾಚಿಕೆಗೇಡು.. ಕ್ಷಮಿಸೋ ಮಾತೇ ಇಲ್ಲ.. ಕಾನೂನು ಕ್ರಮ ಖಂಡಿತ': ನಟ Jr NTR ಕೆಂಡಾಮಂಡಲ, ಆಗಿದ್ದೇನು?

ಮಹತ್ವದ ಬೆಳವಣಿಗೆಯಲ್ಲಿ ಆಪ್ ಮಾಜಿ ವಕ್ತಾರೆ ಪ್ರಿಯಾಂಕಾ, ಮಾಜಿ ಶಾಸಕ ಶ್ಯಾಮ್ ಸುಂದರ್ ಸೇರಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆ!

Asian Games 2026: 'ಈಗ ಮಾಡು ಡಾಕ್ಯುಮೆಂಟರಿ': ಬುಮ್ರಾ ವೇಗದ ಹೊಡೆತಕ್ಕೆ ಪತರುಗುಟ್ಟಿದ ಪಾಕ್ ನಾಯಕ