ನಾರಾಯಣ್ ಆದರ್ಶ
ನಟ, ನಿರ್ಮಾಪಕ, ನಿರ್ದೇಶಕ ಎಸ್.ನಾರಾಯಣ್ ಆದರ್ಶ ಚಲನಚಿತ್ರ ತರಬೇತಿ ಸಂಸ್ಥೆಯ ನೂತನ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಕಲಿಕೆಯ ವಿಷಯದಲ್ಲಿ ನಾನಿನ್ನೂ ವಿದ್ಯಾರ್ಥಿಯೇ. ಆದರೆ, ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಲಹಾ ಮಂಡಳಿಯ ಅಧ್ಯಕ್ಷ ಎ.ಆರ್.ರಾಜು ಅವರು ನನ್ನನ್ನು ಪ್ರಾಂಶುಪಾಲರನ್ನಾಗಿ ನೇಮಿಸಿದ್ದಾರೆ. ನಾಗೇಂದ್ರರಾವ್, ಬಿ.ವಿ. ಕಾರಂತ್, ನಾಗಾಭರಣ, ಭಗವಾನ್ರಂಥ ಅತಿರಥ ಮಹಾರಥರು ಇದ್ದ ಜಾಗದಲ್ಲಿ ನನ್ನನ್ನು ಕೂಡಿಸಲಾಗಿದೆ. ಇದು ನನ್ನ ಜವಾಬ್ದಾರಿ ಹೆಚ್ಚಿಸಿದ್ದು, ಹೊಸ ರೂಪು ರೇಷೆ ಸಿದ್ಧಪಡಿಸಿ ಸಂಸ್ಥೆಯ ಏಳಿಗೆಗಾಗಿ ಶ್ರಮಿಸುತ್ತೇನೆ... ಇದು ಸಂಸ್ಥೆಯಲ್ಲಿ ನಡೆದ 2013-14ರ ಸಾಲಿನ ತರಗತಿಗಳ ಪ್ರಾರಂಭೋತ್ಸವದಲ್ಲಿ ನಾರಾಯಣ್ ಹೇಳಿದ್ದು.
ಇದೇ ಸಂದರ್ಭ, ಸಂಸ್ಥೆಗೆ ಮತ್ತು ವಿದ್ಯಾರ್ಥಿಗಳಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಡೆಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಮಂಡಳಿಯ ಅಧ್ಯಕ್ಷ ವಿಜಯ್ಕುಮಾರ್ ಭರವಸೆ. ನಂತರ ಸಂಸ್ಥೆಯ ಪ್ರಾಂಶುಪಾಲರಾಗಿ 18 ವರ್ಷ ದುಡಿದ ಭಗವಾನ್ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು. ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ ಬಾಬು, ನಿರ್ಮಾಪಕ ಉಮೇಶ್ ಬಣಕಾರ್, ಶ್ರೀನಗರ ಕಿಟ್ಟಿ ಹಾಜರಿದ್ದರು. ಕನ್ನಡ ಚಿತ್ರರಂಗದ ಐದು ದಶಕಗಳ ಅಪ್ರತಿಮ ಸಾಧಕರಾದ ಡಾ.ಲೀಲಾವತಿ, ಡಾ.ರಾಜೇಶ್, ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾದ ಉಪಾಧ್ಯಕ್ಷ ಎ.ಆರ್.ರಾಜು ಮತ್ತು ರಾಜೇಂದ್ರಸಿಂಗ್ ಬಾಬು ಅವರನ್ನು ಸನ್ಮಾನಿಸಲಾಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.