ವಿಚಾರ ಸಂಕಿರಣ
ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ಚಲನಚಿತ್ರ ಅಕಾಡೆಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ವಾರ್ತಾ ಇಲಾಖೆ ಸಹಯೋಗದೊಂದಿಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ 'ಸಿನಿಮಾ ಉದ್ಯಮ-ಮಾಧ್ಯಮ' ಕುರಿತು ವಿಚಾರ ಸಂಕಿರಣವನ್ನು ಡಿಸೆಂಬರ್ 17ರಂದು ಬೆಂಗಳೂರಿ ನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಗೃಹ ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಿದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿ ಗಳಾಗಿ ಸಾರಿಗೆ, ವಾರ್ತಾ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ. ರವಿಕುಮಾರ್, ವಾರ್ತಾ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಚ್.ಡಿ. ಗಂಗರಾಜ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ನಡೆಯುವ ಮೊದಲ ಗೋಷ್ಟಿಯ ಅಧ್ಯಕ್ಷತೆಯನ್ನು ಪ್ರೊ. ಬರಗೂರು ರಾಮಚಂದ್ರಪ್ಪ ವಹಿಸಿದರೆ, ಮಧ್ಯಾಹ್ನ 2.30ಕ್ಕೆ ನಡೆಯುವ ಎರಡನೇ ಗೋಷ್ಠಿಯ ಅಧ್ಯಕ್ಷತೆಯನ್ನು ರಂಗಶಂಕರದ ಆರ್ಟಿಸ್ಟಿಕ್ ಡೈರೆಕ್ಟರ್ ಎಸ್. ಸುರೇಂದ್ರನಾಥ್ (ಸೂರಿ) ವಹಿಸಲಿದ್ದಾರೆ. ಸ್ಥಳ: ಸುಲೋಚನಾ ಸಭಾಂಗಣ, ವಾರ್ತಾ ಸೌಧ, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.