ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೈಟುಕಾಫಿ

ಶತಮಾನದ ಮನೆ

Mainashree
Updated On : 27 Nov 2013, 10:31 am

ಕನ್ನಡದ ಶ್ರೇಷ್ಠ ಗೀತ ನಾಟಕಗಳನ್ನು ಬರೆದ ಕವಿ ಪುತಿನ ಹುಟ್ಟಿ ಬೆಳೆದದ್ದು ಮೇಲುಕೋಟೆಯಲ್ಲಿ. ಅಲ್ಲಿನ ಪರಿಸರ, ಪಂಚಪ್ರಾಣವಾಗಿದ್ದ ಆರಾಧ್ಯ ದೇವರು ಇವರ ಸಾಹಿತ್ಯ ಕೃಷಿಗೆ ಪ್ರೇರಣೆಯಾಗಿದ್ದವು. ಮೇಲುಕೋಟೆಯಲ್ಲಿ ಚಲುವನಾರಾಯಣಸ್ವಾಮಿ, ಯೋಗಾನರಸಿಂಹ ದೇಗುಲಗಳು, ಅಕ್ಕ ತಂಗಿಯರ ಕೊಳ, ಸಂಸ್ಕೃತ ಸಂಶೋಧನಾ ಕೇಂದ್ರಗಳು ಹೇಗೆ ಪ್ರಸಿದ್ಧಿ ಎನಿಸಿಕೊಂಡಿವೆಯೋ ಅದೇ ರೀತಿಯಲ್ಲಿ ಕವಿ ಪುತಿನ ಅವರ ಮನೆಯೂ ಅಷ್ಟೇ ಫೇಮಸ್.

ಪುತಿನ ಮನೆ ಸ್ಮಾರಕವಾಗಿದ್ದು ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ. ಅಂದರೆ, ಪುತಿನ ಬದುಕಿದ್ದ ಕಾಲದಲ್ಲೇ. ಕವಿಯ ಆಶಯವೂ ಅದೇ ಆಗಿತ್ತು; 'ನಾನು ಬದುಕಿರುವಾಗಲೇ ಬಾಳಿ, ಬದುಕಿದ ನನ್ನ ಮನೆ ಸ್ಮಾರಕವಾಗಬೇಕು. ನಾನು ಬರೆದ ಸಾಹಿತ್ಯ ನಿಂತ ನೀರಾಗದೆ, ನನ್ನ ಸಾವಿನಾಚೆಯೂ ಮುಂದಿನ ಪೀಳಿಗೆಯನ್ನು ತಲುಪುವಂತಾಗಬೇಕು'.
1996ರಲ್ಲಿ ಈ ಮನೆ ಸ್ಮಾರಕವಾಗಿ, ಸರ್ಕಾರದ ತೆಕ್ಕೆ ಸೇರಿತು. 1998ರಲ್ಲಿ ಕವಿ ವಿಧಿವಶರಾದ ನಂತರ ಟ್ರಸ್ಟ್‌ನವರು ಕವಿಯ ಬಯಕೆಯಂತೆ ಮನೆಯ ಮೂಲ ರೂಪವನ್ನು ಬದಲಿಸದೇ 2000ನೇ ಇಸ್ವಿಯಲ್ಲಿ ಪ್ರಾಚ್ಯವಸ್ತು ಇಲಾಖೆಗೆ ಗುತ್ತಿಗೆ ನೀಡಿ (10 ಲಕ್ಷ ರು.), ಹೊಸ ರೂಪ ಕೊಡಲು ಮುಂದಾದರು. ಶತಮಾನದ ಅಂಚಿನಲ್ಲಿದ್ದ ಮನೆಯ ಹಳೇ ಕಂಬಗಳು, ಮಹಡಿಯ ಮೆಟ್ಟಿಲುಗಳು, ಹೆಂಚುಗಳನ್ನು ಬಳಸಿಕೊಂಡೇ ಮೂಲ ಮನೆಯ ಅಂದ, ಚಂದಕ್ಕೆ ಯಾವುದೇ ಧಕ್ಕೆ ಬಾರದಂತೆ ಕವಿ ಮನೆಯನ್ನು ಸುಂದರ ಸ್ಮಾರಕವಾಗಿಸಲಾಯಿತು. ಈ ಮನೆಯಲ್ಲಿ ಕವಿ ಪುತಿನ ಅವರ ಊರುಗೋಲು, ಬರೆಯಲು ಬಳಸುತ್ತಿದ್ದ ಮಣೆ, ಟೋಪಿ ಸೇರಿದಂತೆ ಮಹಡಿಯಲ್ಲಿ ಕುಳಿತು ಬರೆಯುತ್ತಿದ್ದ ಜಾಗವನ್ನೂ ಸಂರಕ್ಷಿಸಲಾಗಿದೆ. ಅಲ್ಲದೆ, ಕವಿಯ 'ಮನೆ ದೇಗುಲ', 'ರಥ ಸಪ್ತಮಿ', 'ಹರಿ ಚರಿತೆ', 'ಮಾಂದಳಿರು', 'ಜಾನ್ಹವಿಗೆ ಜೋಡಿ ದೀವಿಗೆ', 'ಗೋಕುಲ ನಿರ್ಗಮನ' ಸೇರಿದಂತೆ ಅನೇಕ ಕೃತಿಗಳ ಪ್ರಥಮ ಮುದ್ರಣವೂ ಇಲ್ಲಿ ನೋಡಲು ಸಿಗುತ್ತದೆ.

ಸರ್ಕಾರ ಮಾಡಬೇಕಾದ ಅನೇಕ ಕೆಲಸಗಳನ್ನು ಟ್ರಸ್ಟ್ ಶ್ರದ್ಧೆ ಮತ್ತು ಶಿಸ್ತಿನಿಂದ ಮಾಡುತ್ತಿದೆ. ಈ ಕಾರಣಕ್ಕಾಗಿ ಕವಿ ಪುತಿನ ಮನೆ, ಮನ ಎರಡೂ ಆನಂದದಾಯಕವಾಗಿದೆ.

- ಕೆ.ಎನ್. ರವಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments