ಮೈಸೂರು ದಸರಾ
ಕ್ರಿ.ಶ. 1640ರಲ್ಲಿ ಶ್ರೀರಂಗಪಟ್ಟಣದಲ್ಲಿ ರಾಜ ಒಡೆಯರ್ ಅವರಿಂದ ಆರಂಭವಾಗಿ, ಇಂದಿಗೂ ಮುಂದುವರಿದುಕೊಂಡು ಬಂದಿದೆ. ಮೈಸೂರಿನ ಮಹಾ ಮೆರವಣಿಗೆಗೆ ಕೋಟ್ಯಂತರ ಜನ ಸಾಕ್ಷಿಯಾಗುತ್ತಾರೆ.
ಇಡೀ ಮೈಸೂರು ನಗರವೇ ಸಿಂಗರಿಸಿಕೊಳ್ಳುತ್ತದೆ. ಜಂಬೂಸವಾರಿ ಸಾಗುವ ರಾಜಮಾರ್ಗವಲ್ಲದೇ ನಗರದ ಪ್ರಮುಖ ರಸ್ತೆಗಳೂ, ಬಡಾವಣೆಗಳೂ, ಅಲ್ಲಿನ ಉದ್ಯಾನಗಳೂ ವಿಶೇಷ ರಂಗಿನಿಂದ ಕಂಗೊಳಿಸುತ್ತವೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ. ದೇಶ ವಿದೇಶಗಳಿಂದಲೂ ಜನರು ಜಂಬೂಸವಾರಿ ವೀಕ್ಷಣೆಗೆ, ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸುತ್ತಾರೆ.
ಶುಭ ಕುಂಭ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ, ತಾಯಿ ಚಾಮುಂಡೇಶ್ವರಿಗೆ ಪೂಜೆ. ನಂತರ ವಿಜಯದಶಮಿಯ ಮೆರವಣಿಗೆ ಬನ್ನಿ ಮಂಟಪದತ್ತ ಸಾಗುತ್ತದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.