ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಡಾ.ಕುರುಂಜಿ ನಿಧನ

Mainashree
Updated On : 7 Aug 2013, 11:33 am

ಸುಳ್ಯ: ನವ ಸುಳ್ಯದ ನಿರ್ಮಾತೃ, ಶಿಕ್ಷಣ ಕ್ಷೇತ್ರದ ಹರಿಕಾರ, ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಸ್ಥಾಪಕಾಧ್ಯಕ್ಷ ಡಾ.ಕುರುಂಜಿ ವೆಂಕಟ್ರಮಣಗೌಡ (85) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಕೊನೆಯುಸಿರೆಳೆದಿದ್ದಾರೆ. ಮೂಲತಃ ಕೃಷಿ ಕುಟುಂಬದಿಂದ ಬಂದ ಕುರುಂಜಿ ವೆಂಕಟ್ರಮಣ ಗೌಡ ಸಾಮಾಜಿಕ ಸೇವಾ ಕ್ಷೇತ್ರಕ್ಕೆ ಧುಮುಕಿ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡಿದ್ದರು.  ಕುರುಂಜಿ ಸಾಧನೆ ಗೌರವಿಸಿ ಅಮೆರಿಕದ ಫ್ಲೋರಿಡಾ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪದವಿ ನೀಡಿತ್ತು. ಪುತ್ರರಾದ ಡಾ.ಕೆ.ವಿ. ಚಿದಾನಂದ, ಡಾ.ಕೆ.ವಿ. ರೇಣುಕಾಪ್ರಸಾದ್, ಪುತ್ರಿ ವರ್ಧಿನಿ ಜಯಕುಮಾರ್, ಅಪಾರ ಬಂಧು ಮಿತ್ರರನ್ನು ಅವರು ಅಗಲಿದ್ದಾರೆ.
ಡಾ.ಕುರುಂಜಿ ವೆಂಕಟ್ರಮಣ ಗೌಡರ ಅಂತ್ಯಕ್ರಿಯೆ ಗುರುವಾರ ನಡೆಯಲಿದೆ.  ಸುಳ್ಯ ನೆಹರೂ ಸ್ಮಾರಕ ಕಾಲೇಜಿನ ರಂಗಮಂದಿರದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement