ಪ್ರಣಾಳಿಕೆ ಜಾರಿಗೆ ಆ್ಯಂಟನಿ ನೇತೃತ್ವ
ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ಚುನಾವಣಾ ಪ್ರಣಾಳಿಕೆ ಜಾರಿ ಮಾಡಲು ಎ.ಕೆ.ಆ್ಯಂಟನಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ.ಈ ಸಮಿತಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ...
ಕನ್ನಡಪ್ರಭ ಪ್ರತಿನಿಧಿಯಿಂದ
ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ಚುನಾವಣಾ ಪ್ರಣಾಳಿಕೆ ಜಾರಿ ಮಾಡಲು ಎ.ಕೆ.ಆ್ಯಂಟನಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ.
ಈ ಸಮಿತಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್, ಕೇಂದ್ರ ಸಚಿವ ನಾರಾಯಣಸ್ವಾಮಿ, ಎಐಸಿಸಿ ಕಾರ್ಯದರ್ಶಿ ಚೆಲ್ಲಕುಮಾರ್, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಜನಾರ್ಧನ ಪೂಜಾರಿ ಸಚಿವ ಎಚ್.ಕೆ. ಪಾಟಿಲ್ ಇದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಸೂಚನೆ ಮೇರೆಗೆ ಸಮಿತಿ ರಚಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ತಿಳಿಸಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿದ್ದ ಅಂಶಗಳ ಜಾರಿಗೆ ಘೋಷಣೆ ಮಾಡಿದ್ದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಣಾಳಿಕೆ ಅಂಶಗಳ ಪರಿಣಾಮಕಾರಿ ಜಾರಿಗೆ ಈ ಸಮಿತಿ ರಚಿಸಲಾಗಿದೆ.