ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಹಾಸ್ಟೆಲ್‌ಗಳಲ್ಲಿ ಸಿಸಿ ಟಿವಿ ಕ್ಯಾಮರಾ: ಸಚಿವ ಆಂಜನೇಯ

Mainashree
Updated On : 9 Aug 2013, 12:24 pm

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ಗಳಲ್ಲಿ ಅವ್ಯವಹಾರ ಮತ್ತು ಅಶಿಸ್ತು ತಡೆಗಟ್ಟಲು ಸಿಸಿ ಟಿವಿ ಕ್ಯಾಮರಾ ಅಳವಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ 13ನೇ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಿಜಲಿಂಗಪ್ಪ ಅವರಿಗೆ ಗೌರವ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ಗಳು ಅವ್ಯವಸ್ಥೆಯ ಆಗರವಾಗಿವೆ. ಲೋಕಾಯುಕ್ತ ನ್ಯಾಯಮೂರ್ತಿಗಳು ಬುಧವಾರ ಹಾಸ್ಟೆಲ್ ಒಂದಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಕಂಡು ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ, ಸಮಸ್ಯೆ ಬಗೆಹರಿಸಲು ಗಂಭೀರ ಕ್ರಮ ಕೈಗೊಳ್ಳುವಂತೆ ಸಲಹೆ ಮಾಡಿದ್ದರು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಹಾಸ್ಟೆಲ್‌ಗಳಲ್ಲಿ ಅಗತ್ಯ ಸೌಕರ್ಯಗಳನ್ನು ಒದಗಿಸುವುದರ ಜತೆಗೆ ಅಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು.
ಹಾಸ್ಟೆಲ್‌ಗಳ ಸುಧಾರಣೆ ಕುರಿತಂತೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಯಾ ಜಿಲ್ಲೆಯ ಹಾಸ್ಟೆಲ್‌ಗಳಿಗೆ ಜಿಲ್ಲಾಧಿಕಾರಿಗಳು ತೆರಳಿ ಅಲ್ಲಿನ ಮಕ್ಕಳೊಂದಿಗೆ ಕುಳಿತು ಊಟ ಮಾಡುವಂತೆ ಸೂಚನೆ ನೀಡಲಾಗಿದೆ. ಇದರಿಂದ ಪರಿಸ್ಥಿತಿಯನ್ನು ಅರಿತುಕೊಳ್ಳಲು ಅನುಕೂಲವಾಗುತ್ತದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ಗಳಲ್ಲಿ ಅವ್ಯವಸ್ಥೆ ಹೆಚ್ಚಲು ಪ್ರಮುಖ ಕಾರಣ ಅಲ್ಲಿ ಇರುವ ಮಾಫಿಯಾ. ಇದನ್ನು ತಡೆಗಟ್ಟಲು ಪ್ರತ್ಯೇಕ ಕಾರ್ಯಪಡೆ ರಚಿಸಲಾಗುವುದು. ಅಲ್ಲಿನ ಮೂಲ ಸೌಕರ್ಯ, ಆಹಾರ ಪದಾರ್ಥ ಪೂರೈಕೆ ವ್ಯವಸ್ಥೆ, ಶೈಕ್ಷಣಿಕ ವ್ಯವಸ್ಥೆ ಬಗ್ಗೆಯೂ ಗಮನಹರಿಸಲಿದೆ. ಅಗತ್ಯ ಬಿದ್ದರೆ ಮಾಫಿಯಾ ತಡೆಗಟ್ಟಲು ಕಾಖಿ ನೆರವು ಪಡೆಯಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement