ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಸಾಹಿತಿಗಳ ಬಲ

Rashmi Kasaragodu
Updated On : 17 Aug 2013, 11:51 am

ರಾಮನಗರ: ಸಾಹಿತಿಗಳಾದ ಪ್ರೊ. ಎಸ್.ಪಿ. ಸಿದ್ದರಾಮಯ್ಯ, ಡಾ.ಎಲ್. ಹನುಮಂತಯ್ಯ, ಪ್ರೊ. ಜಿ.ಕೆ.ಗೋವಿಂದರಾವ್, ಪ್ರೊ. ಎನ್.ವಿ. ನರಸಿಂಹಯ್ಯ, ಪ್ರೊ. ಮರುಳಸಿದ್ದಯ್ಯ ಅವರು ಪ್ರಸಕ್ತ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದು, ವಿಷಯಾಧಾರಿತ ಚುನಾವಣೆ ಬಿಟ್ಟು ಕೆಸರೆರೆಚಾಟಕ್ಕೆ ಇಳಿದ ರಾಜಕಾರಣಿಗಳ ಬಗ್ಗೆ ವಿಷಾದಿಸಿದ್ದಾರೆ. ಅಭಿವೃದ್ಧಿ ವಿಷಯವನ್ನು ಮುಂದಿಟ್ಟುಕೊಂಡು ಮತ ಕೇಳಬೇಕಾದ ರಾಜಕೀಯ ಪಕ್ಷವೊಂದು ಒಬ್ಬ ಹೆಣ್ಣು ಮಗಳ ಹುಟ್ಟಿನ ವಿಚಾರವಾಗಿ ಕೀಳುಮಟ್ಟದ ಹೇಳಿಕೆ ನೀಡಿರುವುದು ಪ್ರಜಾಪ್ರಭುತ್ವದ ಅಧಃಪತನಕ್ಕೆ ಕಾರಣವಾಗಿವೆ ಎಂದು ನಗರದಲ್ಲಿ ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.
ಮತದಾರ ಬೆಲೆ ಕೊಡೊಲ್ಲ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತ ನಡೆಸುತ್ತಿರುವುದನ್ನು ಪ್ರತಿಪಕ್ಷಗಳಿಗೆ ಸಹಿಸಲಾಗುತ್ತಿಲ್ಲ. ವೈಯಕ್ತಿಕ ದ್ವೇಷದಿಂದ ಕಾಂಗ್ರೆಸ್‌ಅನ್ನು ಹಣಿಯಲು ಪ್ರತಿಪಕ್ಷಗಳು ಈ ಅಪವಿತ್ರ ಮೈತ್ರಿಗೆ ಮುಂದಾಗಿವೆ. ಉಭಯ ಕ್ಷೇತ್ರಗಳ ಸಜ್ಜನ ಮತದಾರರು ಇದಕ್ಕೆ ಬೆಲೆ ಕೊಡುವುದಿಲ್ಲ ಎಂದು ಸಾಹಿತಿಗಳು ಹೇಳಿದರು.
ಕಳೆದ 5 ವರ್ಷದ ಅವಧಿಯಲ್ಲಿ ಬಿಜೆಪಿ ನಡೆಸಿದ್ದ ಆಪರೇಷನ್ ಕಮಲಕ್ಕೂ ಈಗ ನಡೆದಿರುವ ಮೈತ್ರಿ ರಾಜಕಾರಣಕ್ಕೂ ಯಾವುದೇ ವ್ಯತ್ಯಾಸವಿಲ್ಲ. ಮತದಾರರು ನೀಡಿದ್ದ ತೀರ್ಪನ್ನು ಧಿಕ್ಕರಿಸಿ, ಜವಾಬ್ದಾರಿ ಮರೆತು ರಾಜಿನಾಮೆ ನೀಡಿ ಈ ಉಪ ಚುನಾವಣೆಗೆ ಎಚ್.ಡಿ. ಕುಮಾರಸ್ವಾಮಿ ಕಾರಣರಾಗಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments