ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಸ್ಥಿತಿ ಹದಗೆಟ್ಟಿದೆ

Rashmi Kasaragodu
Updated On : 17 Aug 2013, 11:51 am

ಧಾರವಾಡ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಿಂದ ದೇಶದ ಆರ್ಥಿಕ ಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದ್ದು, ದಿನದಿಂದ ದಿನಕ್ಕೆ ಭಾರತೀಯ ರುಪಾಯಿ ಮೌಲ್ಯ ಕುಸಿಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಶನಿವಾರ ಇಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಧಾರವಾಡ ಕ್ಷೇತ್ರಕ್ಕೆ ಆ.22ರಂದು ನಡೆಯುವ ಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ನಿತ್ಯ ಹಗರಣಗಳ ಮೇಲೆ ಹಗರಣಗಳನ್ನು ಮಾಡುತ್ತಿದೆ. ಇದರಿಂದ ಬೆಲೆ ಏರಿಕೆ ಹಾಗೂ ಹಣದುಬ್ಬರ ಉಂಟಾಗುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ರುಪಾಯಿ ಮೌಲ್ಯ ಕುಸಿಯುತ್ತಿದೆ ಎಂದರು.
ಕಾಂಗ್ರೆಸ್ ಮೂರು ಹೋಳು: ಸದ್ಯ ಕಾಂಗ್ರೆಸ್ಸಿನಲ್ಲಿಯೂ ಮೂರು ಗುಂಪುಗಳಾಗಿ ವಿಭಜನೆಗೊಂಡಿದ್ದು, ಒಬ್ಬರಿಗೊಬ್ಬರಿಗೆ ಪರಸ್ಪರ ಹೊಂದಣಿಕೆ ಇಲ್ಲ. ಇಂತಹ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾರೊಬ್ಬರ ಮಾತು ಕೇಳದೆ ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತು ಮನ ಬಂದಂತೆ ವರ್ತಿಸುತ್ತಿದ್ದಾರೆ. ಅಲ್ಲದೆ, ಪಕ್ಷದಲ್ಲಿನ ಈ ಗೊಂದಲದಿಂದ ವಾರಕ್ಕೆ ಈ ಮೂರು ಗುಂಪುಗಳ ಮುಖಂಡರು ದೆಹಲಿಗೆ ತೆರಳಬೇಕಿದೆ ವ್ಯಂಗ್ಯವಾಡಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement