ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಗಲ್ಲು ತಡೆ ಅರ್ಜಿ ನಾಳೆ ಸುಪ್ರೀಂನಲ್ಲಿ ವಿಚಾರಣೆ

Srinivasa Murthy VN
Updated On : 20 Aug 2013, 12:41 pm

ನವದೆಹಲಿ: ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಶಿವು ಮತ್ತು ಜಡೇಸ್ವಾಮಿಯ ಪ್ರಾಣ ಭಿಕ್ಷೆ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಮಧ್ಯಾಹ್ನ ನಡೆಯಲಿದೆ. ಈ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಕಾಯಂ ಆಗಿದ್ದು, ಗುರುವಾರ ಮುಂಜಾನೆ ಗಲ್ಲಿಗೇರಿಸಲು ಸಮಯ ನಿಗದಿ ಆಗಿದೆ.
ತಮ್ಮ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ತಗ್ಗಿಸುವಂತೆ ಕೋರಿ ಇಬ್ಬರೂ ಅಪರಾಧಿಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ಅರ್ಜಿದಾರರ ಪರ ವಕೀಲ ಸುಧೀರ್ ಅವರು ಮುಖ್ಯ ನ್ಯಾಯಮೂರ್ತಿ ಸದಾಶಿವಂ ಅವರ ಪೀಠದ ಮುಂದೆ, ಗುರುವಾರವೇ ಗಲ್ಲು ಶಿಕ್ಷೆ ಜಾರಿಗೆ ಸಮಯ ನಿಗದಿ ಪಡಿಸಲಾಗಿದೆ. ದಯವಿಟ್ಟು ತ್ವರಿತವಾಗಿ ತಮ್ಮ ಕಕ್ಷಿದಾರರ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವಂತೆ ಮನವಿ ಮಾಡಿಕೊಂಡರು. ಮುಖ್ಯ ನ್ಯಾಯಮೂರ್ತಿಗಳು ಅರ್ಜಿಯನ್ನು ಬುಧವಾರ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನ ಭದ್ರಯ್ಯನಹಳ್ಳಿ ಗ್ರಾಮದ ಶಿವು ಮತ್ತು ಜಡೇಸ್ವಾಮಿ 19 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿದ್ದರು. ಇಬ್ಬರಿಗೂ ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ ಸುಪ್ರೀಂ ಕೋರ್ಟ್ ಕೂಡ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement