ತೇಜಪಾಲ್ ಆರು ದಿನ ಪೊಲೀಸರ ಅತಿಥಿ
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತೆಹೆಲ್ಕಾ ಮಾಜಿ ಸಂಪಾದಕ ತರುಣ್ ತೇಜ್ಪಾಲ್ರನ್ನು ಆರು ದಿನಗಳ...
ಪಣಜಿ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತೆಹೆಲ್ಕಾ ಮಾಜಿ ಸಂಪಾದಕ ತರುಣ್ ತೇಜ್ಪಾಲ್ರನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಶನಿವಾರ ರಾತ್ರಿಯೇ ತೇಜ್ಪಾಲ್ರನ್ನು ವಶಕ್ಕೆ ತೆಗೆದುಕೊಂಡಿದ್ದ ಗೋವಾ ಪೊಲೀಸರು ಭಾನುವಾರ ಬೆಳಗ್ಗೆ ಮ್ಯಾಜಿಸ್ಟ್ರೇಟರ ಎದುರು ಹಾಜರುಪಡಿಸಿದರು. ಈ ವೇಳೆ ಜ್ಯುಡೀಷಿಯಲ್ ಮ್ಯಾಜಿಸ್ಟ್ರೇಟ್ ಶಮಾ ಜೋಶಿ ಅವರು ತೇಜ್ಪಾಲ್ರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದರು. ಬಳಿಕ ತೇಜ್ಪಾಲ್ರನ್ನು ಠಾಣೆಗೆ ಕರೆದೊಯ್ದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಆರಂಭಿಸಿದರು. ತೇಜ್ಪಾಲ್ರನ್ನು ಸದ್ಯದಲ್ಲೇ ಘಟನಾ ಸ್ಥಳ(ಥಿಂಕ್ ಫೆಸ್ಟಿವರ್ ನಡೆದ ಫೈವ್ಸ್ಟಾರ್ ಹೋಟೆಲ್)ಕ್ಕೂ ಕರೆದೊಯ್ದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
'ದೆಹಲಿ ಗ್ಯಾಂಗ್ರೇಪ್ ಪ್ರಕರಣದ ವೇಳೆ ಇದ್ದಷ್ಟೇ ಆಕ್ರೋಶ ತೇಜ್ಪಾಲ್ ಲೈಂಗಿಕ ಕಿರುಕುಳ ಪ್ರಕರಣ ಬೆಳಕಿಗೆ ಬಂದಾಗಲೂ ಕಂಡುಬಂದಿದೆ. ಆಗ ಪೈಪೋಟಿಗೆ ಬಿದ್ದವರಂತೆ ಹೇಳಿಕೆ ನೀಡುತ್ತಿದ್ದ ನಾಯಕರೆಲ್ಲ ಈಗ ಯಾಕೆ ಮೌನ ವಹಿಸಿದ್ದಾರೆ?
- ಅರುಣ್ ಜೇಟ್ಲಿ, ಬಿಜೆಪಿ ಮುಖಂಡ