ಅಪಘಾತಕ್ಕೆ 6 ಬಲಿ
ಬೆಳಗಾವಿ: ಇಲ್ಲಿಯ ಶ್ರೀನಗರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಎರಡು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ. ಧಾರವಾಡದ ಕೃಷಿ ವಿವಿಯ ಬಳಿಯ ನಿವಾಸಿಗಳಾದ ಇವರು ನಿಪ್ಪಾಣಿ ತಾಲೂಕಿನಲ್ಲಿರುವ ಸ್ಥವನಿಧಿ ಎಂಬ ಜೈನ ಬಸದಿಗೆ ಹೋಗಿ ವಾಪಸಾಗುತ್ತಿದ್ದರು. ಈ ವೇಳೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತೊಬ್ಬರು ಗಾಯಗೊಂಡಿದ್ದಾರೆ.