80ನೇ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ನಾ. ಡಿಸೋಜ
ಮಡಿಕೇರಿಯಲ್ಲಿ ನಡೆಯುವ 80ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಹಿರಿಯ ಸಾಹಿತಿ ನಾಡೋಜಾ ಪ್ರಶಸ್ತಿ ಪುರಸ್ಕೃತ...
ಬೆಂಗಳೂರು: ಮಡಿಕೇರಿಯಲ್ಲಿ ನಡೆಯುವ 80ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಹಿರಿಯ ಸಾಹಿತಿ ನಾಡೋಜಾ ಪ್ರಶಸ್ತಿ ಪುರಸ್ಕೃತ ನಾ.ಡಿಸೋಜ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳ ಸಭೆಯಲ್ಲಿ ಅನೇಕ ಸಾಹಿತಿಗಳ ಬಗ್ಗೆ ಪರಿಶೀಲನೆ ನಡೆಯಿತು. ಅಂತಿಮವಾಗಿ ಹಿರಿಯ ಸಾಹಿತಿ ನಾ.ಡಿಸೋಜ ಅವರ ಆಯ್ಕೆಯನ್ನು ಅನುಮೋದಿಸಲಾಯಿತು.