ತೇಜ್ಪಾಲ್ಕಸ್ಟಡಿ 10ರವರೆಗೆ ವಿಸ್ತರಣೆ
ಪಣಜಿ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪಣಜಿ ಪೊಲೀಸರಿಂದ ಬಂಧಿತರಾದ ತೆಹೆಲ್ಕಾ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ಪಾಲ್ ಪೊಲೀಸ್ ಕಸ್ಟಡಿ ಅವಧಿಯನ್ನು ಇನ್ನೂ ನಾಲ್ಕು ದಿನಗಳ ಕಾಲ ವಿಸ್ತರಿಸಲಾಗಿದೆ. ಕಳೆದ ವಾರ ಅವರನ್ನು ಬಂಧಿಸಿ, ಪಣಜಿ ಸೆಷನ್ಸ್ ಕೋರ್ಟ್ಗೆ ಹಾಜರುಪಡಿಸಿದ್ದ ವೇಳೆ ಅವರನ್ನು ಆರು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಲಾಗಿತ್ತು. ಈ ಅವಧಿ ಶನಿವಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದರು. ಈ ಸಂದರ್ಭದಲ್ಲಿ ತೇಜ್ಪಾಲ್ ಅವರನ್ನು ಇನ್ನೂ ವಿಚಾರಣೆಗೆ ಒಳಪಡಿಸಿ ಪ್ರಕರಣಕ್ಕೆ ಸಂಬಂಧಿಸಿ ಮಾಹಿತಿ ಪಡೆಯಬೇಕು ಎಂದರು.