ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಎಎಪಿಗೆ ಬಾಹ್ಯ ಬೆಂಬಲ; ಕೈ ಮುಂದು

ದೆಹಲಿಯಲ್ಲಿ ಸರ್ಕಾರ ರಚನೆ ಪ್ರಯತ್ನಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಇದರಿಂದಾಗಿ ದೆಹಲಿಯಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದ ಅತಂತ್ರ ಸ್ಥಿತಿ ಇನ್ನೂ ಮುಂದುವರಿದಿದೆ.

Srinivasa Murthy VN
Updated On : 11 Dec 2013, 1:17 am

ನವದೆಹಲಿ: ಬಿಜೆಪಿಗೆ ಬೆಂಬಲ ನೀಡಲು ಆಮ್ ಆದ್ಮಿ ಪಕ್ಷ ಮತ್ತೊಮ್ಮೆ ಸ್ಪಷ್ಟವಾಗಿ ನಿರಾಕರಿಸಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸರ್ಕಾರ ರಚನೆ ಪ್ರಯತ್ನಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಇದರಿಂದಾಗಿ ದೆಹಲಿಯಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದ ಅತಂತ್ರ ಸ್ಥಿತಿ ಇನ್ನೂ ಮುಂದುವರಿದಿದೆ.
ಈ ನಡುವೆ, ಒಂದು ವೇಳೆ ಆಮ್ ಆದ್ಮಿ ಪಕ್ಷವೇನಾದರೂ ಸರ್ಕಾರ ರಚನೆಗೆ ಮುಂದಾದರೆ ಬಾಹ್ಯ ಬೆಂಬಲ ನೀಡುವ ಕುರಿತು ಚಿಂತನೆ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ. ಆದರೆ, ಈ ವಿಚಾರದಲ್ಲಿ ಪಕ್ಷದ ಶಾಸಕರ ನಿರ್ಧಾರವೇ ಅಂತಿಮ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ದೆಹಲಿ ಕಾಂಗ್ರೆಸ್ ಉಸ್ತುವಾರಿ ಶಕೀಲ್ ಅಹ್ಮದ್ ಹೇಳಿದ್ದಾರೆ. ಬಿಜೆಪಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಲ್ಲ ಎಂದು ಪಕ್ಷದ ಮುಖಂಡ ಅರವಿಂದ ಕೇಜ್ರಿವಾಲ್ ಘೋಷಿಸಿದ ಬೆನ್ನಲ್ಲೇ ಶಕೀಲ್ ಅಹ್ಮದ್ ಈ  ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸೋಮವಾರ ಪಕ್ಷದ ಪ್ರಮುಖ ಮುಖಂಡ ಪ್ರಶಾಂತ್ ಭೂಷಣ್  ಸರ್ಕಾರ ರಚನೆ ವೇಳೆ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆಯನ್ನು ಆಮ್ ಆದ್ಮಿ ಪರಿಶೀಲಿಸಬಹುದು ಎಂದಿದ್ದರು. ಆದರೆ, ಇಂತಹ ಯಾವುದೇ ಸಾಧ್ಯತೆಯನ್ನು ಕೇಜ್ರಿವಾಲ್ ತಳ್ಳಿಹಾಕಿದ್ದಾರೆ. ಪ್ರಶಾಂತ್ ಭೂಷಣ್ ಹೇಳಿಕೆಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ, ್ಟ ಸಂಖ್ಯಾ ಬಲದ ಕೊರತೆ ಎದುರಿಸುತ್ತಿರುವ ಬಿಜೆಪಿ ಮತ್ತೊಮ್ಮೆ ಚುನಾವಣೆ ಎದುರಿಸಲು ಸಿದ್ಧ ಎಂದಿದೆ.
ದರ ಏರಿಕೆ ಹಿಂದಕ್ಕೆ?: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿನ ಸೋಲು ಕಾಂಗ್ರೆಸ್ಗೆ ತನ್ನ ಕೆಲವು ನೀತಿಗಳ ಕುರಿತು ಪುನರಾವಲೋಕನ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ.  ಅಡುಗೆ ಅನಿಲ ಸಿಲಿಂಡರ್ ಬಳಕೆ ಮೇಲೆ ವಾರ್ಷಿಕ ಮಿತಿ ಹೇರಿಕೆ ಹಾಗೂ ತೈಲ ದರ ಏರಿಕೆಗೆ ಸಂಬಂಧಿಸಿದ ನೀತಿಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಸಿಂಗ್ ಪಿಎಂ ಆದದ್ದೇ ತಪ್ಪು
2009ರ ಚುನಾವಣೆ ಬಳಿಕ ಮನಮೋಹನ ಸಿಂಗ್ರನ್ನು ಪ್ರಧಾನಮಂತ್ರಿ ಮಾಡಿದ್ದೇ ತಪ್ಪು. ಈ ತಪ್ಪಿನಿಂದಾಗಿ ಮುಂಬರುವ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿ ಕೂರಲಿದೆ...! ಹೀಗೆಂದದ್ದು ಬೇರಾರೂ ಅಲ್ಲ. ಕಾಂಗ್ರೆಸ್ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್. ಈ ಮೂಲಕ  ಸಿಂಗ್ ನಾಯಕತ್ವದ ವಿರುದ್ಧ ಈಗ ಮತ್ತೊಮ್ಮೆ ಅಪಸ್ವರ ಹೊರಬಿದ್ದಂತಾಗಿದೆ. ಈ ಬಗ್ಗೆ ತಾವು ವರಿಷ್ಠರಿಗೆ ತಿಳಿಸಿದ್ದೆ. ಆದರೆ ಅವರು ತಮ್ಮ ಮಾತು ಕೇಳಲಿಲ್ಲ ಎಂದರು ಅಯ್ಯರ್.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement