ರಾಜ್ಯ ಮಾನವ ಹಕ್ಕು ಆಯೋಗಕ್ಕೆ ನ್ಯಾ. ಮುರುಗೇಶನ್ ಅಧ್ಯಕ್ಷ?
ಕನ್ನಡಪ್ರಭ ವಾರ್ತೆ, ಬೆಂಗಳೂರು, ಡಿ.17-
ರಾಜ್ಯ ಮಾನವ ಹಕ್ಕು ಆಯೋಗಕ್ಕೆ (ಎಚ್ಎಸ್ಆರ್ಸಿ) ಕೊನೆಗೂ ಹೊರ ರಾಜ್ಯದ ನ್ಯಾಯಮೂರ್ತಿಗಳೇ ಅಧ್ಯಕ್ಷರಾಗುವುದು ಖಚಿತವಾಗಿದೆ. ತಮಿಳುನಾಡು ಮೂಲದ ನ್ಯಾ. ಡಿ.ಮುರುಗೇಶನ್ ಅವರನ್ನು ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡುವುದಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಕಾನೂನು ಮತ್ತು ಸಂದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮುರುಗೇಶನ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ.