ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ವಿಷಾದ ಬೇಡ, ಕ್ಷಮೆ ಬೇಕು

ಭಾರತೀಯ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಜತೆಗಿನ ಅಮಾನವೀಯ ವರ್ತನೆಗೆ ಅಮೆರಿಕ ವಿಷಾದ ವ್ಯಕ್ತಪಡಿಸಿದ್ದು...

Vishwanath S
Updated On : 20 Dec 2013, 1:00 am

ನವದೆಹಲಿ/ವಾಷಿಂಗ್ಟನ್: ಭಾರತೀಯ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಜತೆಗಿನ ಅಮಾನವೀಯ ವರ್ತನೆಗೆ ಅಮೆರಿಕ ವಿಷಾದ ವ್ಯಕ್ತಪಡಿಸಿದ್ದು, ಇದನ್ನು ಭಾರತ ತಿರಸ್ಕರಿಸಿದೆ. ವಿಷಾದ ವ್ಯಕ್ತಪಡಿಸಿದರೆ ಸಾಲದು ಅಮೆರಿಕ ತನ್ನ ತಪ್ಪಿಗಾಗಿ ಕ್ಷಮೆ ಕೋರಬೇಕು ಎಂದು ಪಟ್ಟುಹಿಡಿದಿದೆ. ಜತೆಗೆ, ದೇವಯಾನಿ ವಿರುದ್ಧ ದಾಖಲಿಸಲಾಗಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯುವಂತೆಯೂ ಭಾರತ ಒತ್ತಾಯಿಸಿದೆ.
ಘಟನೆಯಿಂದಾಗಿ ಹೆಚ್ಚುತ್ತಿರುವ ಆಕ್ರೋಶದ ಹಿನ್ನೆಲೆಯಲ್ಲಿ ಅಮೆರಿಕದ ವಿದೇಶಾಂಗ ಸಚಿವ ಜಾನ್ ಕೆರ್ರಿ ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್ ಅವರಿಗೆ ಕರೆ ಮಾಡಿ ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಜತೆಗೆ, ಈ ವಿಚಾರ ಎರಡೂ ದೇಶಗಳ ಆತ್ಮೀಯ ಸಂಬಂಧದ ಮೇಲೆ ಪರಿಣಾಮ ಬೀರುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.
ಆದರೆ, ಅಮೆರಿಕ ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆಕೋರಿದರಷ್ಟೆ ನಮಗೆ ತೃಪ್ತಿಯಾಗಲು ಸಾಧ್ಯ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಮಲ್‌ನಾಥ್ ಸ್ಪಷ್ಟವಾಗಿ ತಿಳಿಸಿದ್ದಾರೆ. ಈ ನಡುವೆ, ದೇವಯಾನಿ ಪ್ರಕರಣದಲ್ಲಿ ಅಮೆರಿಕದ ಕ್ರಮವನ್ನು ಸಮರ್ಥಿಸಿಕೊಂಡಿರುವ ಭಾರತೀಯ ಮೂಲದ ಅಮೆರಿಕನ್ ಪ್ರಾಸಿಕ್ಯೂಟರ್ ಪ್ರೀತ್ ಭರಾರಾ ಕ್ರಮಕ್ಕೂ ವಿದೇಶಾಂಗ ಸಚಿವಾಲಯ ಖಾರವಾದ ಉತ್ತರ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement