ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಸಕ್ಕರೆ ಕಾರ್ಖಾನೆಗೆ 6600 ಕೋಟಿ ಸಾಲ

Vishwanath S
Updated On : 20 Dec 2013, 1:00 am

ನವದೆಹಲಿ: ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಸಕ್ಕರೆ ಕಾರ್ಖಾನೆಗಳಿಗೆ 6600 ಕೋಟಿ ಬಡ್ಡಿರಹಿತ ಸಾಲ ನೀಡುವ ಪ್ರಸ್ತಾಪಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ಸಚಿವರ ಸಮಿತಿ ಸಭೆಯಲ್ಲಿ ಗುರುವಾರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಸಕ್ಕರೆ ಕಾರ್ಖಾನೆಗಳು ಕಬ್ಬುಬೆಳೆಗಾರರಿಗೆ ಹಣ ಪಾವತಿಸಲು ಅನುವಾಗುವ ನಿಟ್ಟಿನಲ್ಲಿ ಈ ಸಾಲ ನೀಡಲಾಗುತ್ತಿದೆ ಎಂದು ಆಹಾರ ಸಚಿವ ಕೆ.ವಿ. ಥಾಮಸ್ ಮಾಹಿತಿ ನೀಡಿದ್ದಾರೆ.
ಆರಂಭದಲ್ಲಿ 7200 ಕೋಟಿ ಸಾಲ ನೀಡಲು ಉದ್ದೇಶಿಸಲಾಗಿತ್ತು. ಆದರೆ, ಹಣಕಾಸು ಸಚಿವಾಲಯದ ವಿರೋಧದಿಂದಾಗಿ ಈ ಸಾಲದ ಪ್ರಮಾಣವನ್ನು 6600 ಕೋಟಿಗಿಳಿಸಲಾಯಿತು. ಈ ಸಾಲವನ್ನು ಕಾರ್ಖಾನೆಗಳು ಐದು ವರ್ಷಗಳಲ್ಲಿ ಮರುಪಾವತಿಸಬೇಕಾಗುತ್ತದೆ.ಈ ಸಾಲವನ್ನು ಬ್ಯಾಂಕ್‌ಗಳ ಮೂಲಕ ಪಾವತಿಸಲಾಗುತ್ತಿದ್ದು, ಇದರ ಮೇಲೆ ವಿಧಿಸಲಾಗುವ ಶೇ. 12ರಷ್ಟು(2,750 ಕೋಟಿ) ಬಡ್ಡಿಯನ್ನು ಸರ್ಕಾರದ ಸಕ್ಕರೆ ಅಭಿವೃದ್ಧಿ ನಿಧಿ ಮೂಲಕ ಪಾವತಿಸಲಾಗುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement