ಮೀಸಲಾತಿ ಪಟ್ಟಿ ಸಲ್ಲಿಕೆಗೆ ಕಾಲಾವಕಾಶ ಕೋರಿದ ರಾಜ್ಯ
ನವದೆಹಲಿ: ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡಲು ಶತಾಯಗತಾಯ ಪ್ರಯತ್ನಿಸುತ್ತಿರುವ ಕರ್ನಾಟಕ ಸರ್ಕಾರ ಮೀಸಲಾತಿ ಪಟ್ಟಿ ಸಲ್ಲಿಕೆಗೆ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್ಗೆ ಮತ್ತೆ ಮೊರೆ ಹೋಗಿದೆ.
ಸ್ಥಳೀಯ ಸಂಸ್ಥೆಗಳಿಗೆ ಫೆಬ್ರವರಿ 3ರೊಳಗೆ ಮೀಸಲು ನಿಗದಿಪಡಿಸಿ ಮತ್ತು ನಿಗದಿತ ಅವಧಿಯೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ವಿನಂತಿಸಿದೆ. ಫೆ.8 ರಂದು ವಿಧಾನಮಂಡಲದಲ್ಲಿ ಬಜೆಟ್ ಮಂಡನೆ ಆಗಲಿದ್ದು, ಬಹುತೇಕ ಎಲ್ಲ ಅಧಿಕಾರಿಗಳು ಬಜೆಟ್ ಸಿದ್ಧತೆಯಲ್ಲಿ ತೊಡಗಿರುವುದರಿಂದ ಫೆ.3ರೊಳಗೆ ಮೀಸಲಾತಿ ಸಿದ್ದಪಡಿಸಿ ಚುನಾವಣಾ ಆಯೋಗಕ್ಕೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಫೆ.15ರವರೆಗೆ ಕಾಲಾವಕಾಶ ನೀಡಬೇಕೆಂದು ತಿಳಿಸಿದೆ.
ಕರ್ನಾಟಕ ಸರ್ಕಾರ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿ ಸೋಮವಾರ ವಿಚಾರಣೆಗೆ ಬರಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.